ರಾಜ್ಯ

ಹೈದರಾಬಾದ್‌ನಲ್ಲಿ ಕರ್ನಾಟಕ ಸಚಿವ ಶಿವಾನಂದ್ ಪಾಟೀಲ್ ಮೇಲೆ ನೋಟುಗಳ ಮಳೆಸುರಿಸಿದ ವಿಡಿಯೋ ವೈರಲ್! ಬಿಜೆಪಿ ವಾಗ್ದಾಳಿ

ಹೈದರಾಬಾದ್‌ನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಸಚಿವ ಶಿವಾನಂದ್ ಪಾಟೀಲ್ ಅವರ ಮೇಲೆ ಕರೆನ್ಸಿ ನೋಟುಗಳ ಸುರಿಮಳೆಯಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಕರ್ನಾಟಕ ಬಿಜೆಪಿ ಘಟಕ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

ಹೈದರಾಬಾದ್‌ನಲ್ಲಿ ಕರ್ನಾಟಕ ಸಚಿವ ಶಿವಾನಂದ್ ಪಾಟೀಲ್ ಮೇಲೆ ನೋಟುಗಳ ಮಳೆಸುರಿಸಿದ ವಿಡಿಯೋ ವೈರಲ್! ಬಿಜೆಪಿ ವಾಗ್ದಾಳಿ
ಸಚಿವ ಶಿವಾನಂದ ಪಾಟೀಲ್ ಮೇಲೆ ನೋಟುಗಳ ಮಳೆ
Published On :

ಬೆಂಗಳೂರು: ಹೈದರಾಬಾದ್‌ನಲ್ಲಿ ನಡೆದ ಮದುವೆ ಸಮಾರಂಭದ ವೇಳೆ ಸಚಿವ ಶಿವಾನಂದ್ ಪಾಟೀಲ್ ಅವರ ಮೇಲೆ ಕರೆನ್ಸಿ ನೋಟುಗಳ ಸುರಿಮಳೆಯಾಗುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಕರ್ನಾಟಕ ಬಿಜೆಪಿ ಘಟಕ ಬುಧವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

ಮೂರು ದಿನಗಳ ಹಿಂದೆ 'ಕವ್ವಾಲಿ' ಆಯೋಜಿಸಿದ್ದ ಮದುವೆಯಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪ್ರತಿಕ್ರಿಯಿಸಿದ ಸಚಿವರು, ಇದು ಬೇರೆ ರಾಜ್ಯದಲ್ಲಿ ನಡೆದಿದೆಯೇ ಹೊರತು ನಮ್ಮ ರಾಜ್ಯದಲ್ಲಿ ನಡೆದಿದ್ದಲ್ಲ ಹೀಗಾಗಿ ನಾನು ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದರು.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಜವಳಿ ಮತ್ತು ಕಬ್ಬು ಅಭಿವೃದ್ಧಿ ಖಾತೆಗಳ ಸಚಿವ ಶಿವಾನಂದ್ ಪಾಟೀಲ್ ಅವರ ಮೇಲೆ ಅಲ್ಲಿದ್ದವರು ಕರೆನ್ಸಿ ನೋಟುಗಳ ಸುರಿಮಳೆಗೈದಿದ್ದಾರೆ.

ಈ ವಿಡಿಯೋವನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಬಿಜೆಪಿ ಘಟಕ, 'ಕರ್ನಾಟಕದ ಕಾಂಗ್ರೆಸ್ ಸಚಿವರು ವಸೂಲಾತಿ ದಂಧೆಯಲ್ಲಿ ಮುಳುಗಿದ್ದಾರೆ. ಲೂಟಿ ಮಾಡಿದ ಹಣದಲ್ಲಿ ಮಂತ್ರಿಗಳು ಹೇಗೆ ಆನಂದಿಸುತ್ತಿದ್ದಾರೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ನೇರ ಪ್ರದರ್ಶನ ನೀಡಿದ್ದಾರೆ ಎಂದು ಕಿಡಿಕಾರಿದರು.

ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಯ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಚಿವರನ್ನು ಕೇಳಿ ವಿವರ ಪಡೆಯುವುದಾಗಿ ಹೇಳಿದರು.

ಇನ್ನು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಮಾತನಾಡಿ, ನಿಜವಾಗಿ ಏನಾಯಿತು ಎಂದು ತಿಳಿಯದೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.