ವಿಧಾನ ಸೌಧ-ವಿಕಾಸ ಸೌಧಗಳಲ್ಲಿ ರಾಸಾಯನಿಕ ಮಿಶ್ರಿತ ಅರಶಿನ-ಕುಂಕುಮ ಬಳಕೆ ನಿಷೇಧ ಹಿಂದಿನಿಂದಲೂ ಇದೆ: ಸಿಎಂ ಸ್ಪಷ್ಟನೆ
ಸಾಂಪ್ರದಾಯಿಕ ಪೂಜೆ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧ, ವಿಕಾಸ ಸೌಧ ಕಟ್ಟಡಗಳ ಒಳಗೆ ನೆಲಹಾಸುಗಳಿಗೆ ರಂಗೋಲಿಗಳಿಗೆ ರಾಸಾಯನಿಕ ಮಿಶ್ರಿತ ಬಣ್ಣ, ಅರಶಿನ-ಕುಂಕುಮ, ಸುಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಬೆಂಗಳೂರು: ಸಾಂಪ್ರದಾಯಿಕ ಪೂಜೆ, ಹಬ್ಬ-ಹರಿದಿನಗಳ ಸಂದರ್ಭದಲ್ಲಿ ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧ, ವಿಕಾಸ ಸೌಧ ಕಟ್ಟಡಗಳ ಒಳಗೆ ನೆಲಹಾಸುಗಳಿಗೆ ರಂಗೋಲಿಗಳಿಗೆ ರಾಸಾಯನಿಕ ಮಿಶ್ರಿತ ಬಣ್ಣ, ಅರಶಿನ-ಕುಂಕುಮ, ಸುಣ್ಣ ಬಳಕೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.
ಕಾಂಗ್ರೆಸ್ ಸರ್ಕಾರ ವಿಧಾನ ಸೌಧ-ವಿಕಾಸ ಸೌಧಗಳಲ್ಲಿ ಹಿಂದೂಗಳ ಸಾಂಪ್ರದಾಯಿಕ ಆಚರಣೆಯಾದ ಅರಶಿನ-ಕುಂಕುಮ ಬಳಕೆಯನ್ನು ನಿಷೇಧಿಸಿದೆ ಎಂದು ವ್ಯಾಪಕ ಸುದ್ದಿಯಾಗಿ ಟೀಕೆ ಕೂಡ ವ್ಯಕ್ತವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಈ ಹಿಂದಿನ ಬಿಜೆಪಿ ಸರ್ಕಾರವೇ ಆದೇಶ ಹೊರಡಿಸಿತ್ತು, ನಾವು ಹೊಸದಾಗಿ ಹೊರಡಿಸಿರುವ ಆದೇಶವಲ್ಲ. ರಾಸಾಯನಿಕಯುಕ್ತ ಬಣ್ಣಗಳು ಪಾರಂಪರಿಕ ಕಟ್ಟಡಗಳ ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಮುಂದುವರಿಸುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


