ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೆ ವಿ ಅರವಿಂದ್ ನೇಮಕ
ವಕೀಲ ಕೆ ವಿ ಅರವಿಂದ್ ಅವರನ್ನು 2 ವರ್ಷಗಳ ಅವಧಿಗೆ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.

ಬೆಂಗಳೂರು: ವಕೀಲ ಕೆವಿ ಅರವಿಂದ್ ಅವರನ್ನು 2 ವರ್ಷಗಳ ಅವಧಿಗೆ ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರವು ಬುಧವಾರ ಅಧಿಸೂಚನೆ ಹೊರಡಿಸಿದೆ.
ಕುರುಬರಹಳ್ಳಿ ವೆಂಕಟರಾಮರೆಡ್ಡಿ ಅರವಿಂದ್ ಅವರನ್ನು ಸಂವಿಧಾನದ 224ನೇ ವಿಧಿ ಕ್ಲಾಸ್ (1) ರ ಅಡಿ ದೊರೆತಿರುವ ಅಧಿಕಾರ ಬಳಸಿ ರಾಷ್ಟ್ರಪತಿ ಅವರು ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಿದ್ದಾರೆ.
2023ರ ಜುಲೈ 18ರಂದು ಅರವಿಂದ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.
ಅರವಿಂದ್ ಅವರು 23 ವರ್ಷಗಳಿಂದ ವಕೀಲರಾಗಿದ್ದಾರೆ ಎಂದು ಕೊಲಿಜಿಯಂ ವಿವರಿಸಿದ್ದು, 567 ವರದಿಯಾಗಿರುವ ತೀರ್ಪುಗಳಲ್ಲಿ ವಾದಿಸಿದ್ದಾರೆ ಎಂದು ಕೊಲಿಜಿಯಂ ಹೇಳಿತ್ತು. ಪ್ರಸಕ್ತ ವರ್ಷದ ಜನವರಿಯಲ್ಲಿ ಅರವಿಂದ್ ಅವರ ವಿಚಾರದಲ್ಲಿ ನಿರ್ಣಯವನ್ನು ಕೈಗೊಳ್ಳುವುದನ್ನು ಮುಂದೂಡಲಾಗಿತ್ತು. ಅರವಿಂದ್ ಅವರು ಹುದ್ದೆಗೆ ಸೂಕ್ತ ಹಾಗೂ ಸಮರ್ಥರಾಗಿದ್ದಾರೆ ಎಂದು ಕೊಲಿಜಿಯಂ ಹೇಳಿತ್ತು.
ತೆರಿಗೆ ವಿಚಾರದಲ್ಲಿ ವಕೀಲ ಅರವಿಂದ್ ಅವರ ಅನುಭವನ್ನು ನಿರ್ಣಯದಲ್ಲಿ ಒತ್ತಿ ಹೇಳಲಾಗಿದ್ದು, ಕರ್ನಾಟಕ ಹೈಕೋರ್ಟ್‌ಗೆ ನಿರ್ದಿಷ್ಟ ಕ್ಷೇತ್ರದಲ್ಲಿ ತಜ್ಞತೆ ಇರುವವರ ಅಗತ್ಯವಿದೆ ಎಂದಿದೆ. “ಕರ್ನಾಟಕ ಹೈಕೋರ್ಟ್‌ನಲ್ಲಿ ತೆರಿಗೆ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಈ ನಿಟ್ಟಿನಲ್ಲಿ ತಜ್ಞತೆ ಇರುವ ನ್ಯಾಯಮೂರ್ತಿಗಳ ಅಗತ್ಯವಿದೆ. ವಾಣಿಜ್ಯ, ಕಾರ್ಪೊರೇಟ್ ಮತ್ತು ವೈಯಕ್ತಿಕ ಕಾನೂನು ಸೇರಿದಂತೆ ಇತರೆ ಕಾನೂನು ಕ್ಷೇತ್ರಗಳ ಜೊತೆ ತೆರಿಗೆ ಕಾನೂನು ಅವಿಭಾಜ್ಯ ಸಂಬಂಧ ಹೊಂದಿದೆ.
ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಅವರ ಪದೋನ್ನತಿಯ ವಿಚಾರದ ಪ್ರಸ್ತಾವವನ್ನು ಪರಿಗಣಿಸಿ ಕೆ ವಿ ಅರವಿಂದ್ ಅವರು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕಗೊಳ್ಳಲು ಸೂಕ್ತ ಹಾಗೂ ಸಮರ್ಥರಾಗಿದ್ದಾರೆ ಎನ್ನುವುದು ಕೊಲಿಜಿಯಂನ ವಿವೇಚನಾಯುಕ್ತ ಅಭಿಪ್ರಾಯವಾಗಿದೆ” ಎಂದು ಈ ಕುರಿತಾದ ನಿರ್ಣಯದಲ್ಲಿ ಕೊಲಿಜಿಯಂ ಹೇಳಿದ್ದನ್ನು ಇಲ್ಲಿ ನೆನೆಯಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


