100 ಗ್ರಾಮ ಕೋರ್ಟ್ ಸ್ಥಾಪನೆ; ಮತ್ತೆ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಅಸ್ತು
ವಾಹನಗಳ ಸಿಎನ್ಜಿ ಹಾಗೂ ಗೃಹ ಬಳಕೆಯ ಪಿಎನ್ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು: ವಾಹನಗಳ ಸಿಎನ್ಜಿ ಹಾಗೂ ಗೃಹ ಬಳಕೆಯ ಪಿಎನ್ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ ಕೆ ಪಾಟೀಲ್ ಅವರು, ಸಿಟಿ ಗ್ಯಾಸ್ ಡಿಸ್ಟ್ರಿಬ್ಯೂಷನ್ ನೆಟ್ವರ್ಕ್ ಪಾಲಿಸಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ನೈಋತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ರಾಜ್ಯದ 195 ತಾಲೂಕುಗಳು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಿದ್ದೆವು. ಇದೀಗ ಹೊಸದಾಗಿ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.
100 ಗ್ರಾಮ ನ್ಯಾಯಾಲಯ ಸ್ಥಾಪನೆಗೂ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದೆ. 2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. 100 ಗ್ರಾಮ ಕೋರ್ಟ್ ಸ್ಥಾಪನೆಗೆ ಅಂದಾಜು 25 ರಿಂದ 30 ಕೋಟಿ ಆಗಬಹುದು ಎಂದು ಸಚಿವರು ತಿಳಿಸಿದ್ದಾರೆ.
ಇನ್ನು ವೈದ್ಯಕೀಯ ಶಿಕ್ಷಣ ಪಡೆದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆ ತಿದ್ದುಪಡಿ ವಿಧೇಯಕಕ್ಕೂ ಅನುಮೋದನೆ ನೀಡಲಾಗಿದ್ದು, ಕಡ್ಡಾಯ ಗ್ರಾಮೀಣ ಸೇವೆಯನ್ನು ಬದಲಾವಣೆ ಮಾಡಿ, ಖಾಲಿ ಹುದ್ದೆಗಳಿಗೆ ಅಗತ್ಯವಿರುವಷ್ಟು ಮಾತ್ರ ಕಡ್ಡಾಯ ಸೇವೆಗೆ ಅನುಮತಿ ನೀಡಲಾಗುವುದು ಎಂದು ಎಚ್.ಕೆ.ಪಾಟಿೀಲ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


