ಬೆಳಗಾವಿ: ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಡಿಡಿಪಿಐ
ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಳಗಾವಿ: ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಿತ್ತೂರು ತಾಲೂಕಿನ ತುರುಮುರಿ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡಿಕೊಡಲು ಬಸವರಾಜ್ ನಾಲತವಾಡ ಅವರು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಶಾಲೆ ಮುಖ್ಯಸ್ಥ ಅರ್ಜುನ ಕುರಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಇಂದು 40 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಸವರಾಜ್ ನಾಲತವಾಡ ಅವರನ್ನು ಲಂಚದ ಹಣದ ಸಹಿತ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


