ಮದ್ದೂರು: ಕೌಟುಂಬಿಕ ಕಲಹ ಹಿನ್ನೆಲೆ; ಪತ್ನಿ ಮತ್ತು ಮಗನಿಂದ ವ್ಯಕ್ತಿ ಕೊಲೆ
ಐದು ತಿಂಗಳ ಹಿಂದೆ ಜಗಳ ನಡೆದು ಉಮೇಶ್ ಪತ್ನಿ ಸವಿತಾ(45) ಹಾಗೂ ಮಗ ಶಶಾಂಕ್(22) ಸೇರಿ ಆತನ ಕಾಲಿಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದರು.

ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ವ್ಯಕ್ತಿಯನ್ನು ಆತನ ಪತ್ನಿ ಹಾಗೂ ಮಗ ಸೇರಿ ಕೊಲೆ ಮಾಡಿದ್ದಾರೆ.
ಮದ್ದೂರು ತಾಲೂಕು ಚಾಪುರದೊಡ್ಡಿ ಗ್ರಾಮದಲ್ಲಿ ಉಮೇಶ್ (50) ಎಂಬಾತನ ಕೊಲೆಯಾಗಿದೆ. ಕೌಟುಂಬಿಕ ಸಮಸ್ಯೆಯಿಂದಾಗಿ ಗಂಡ ಮತ್ತು ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಐದು ತಿಂಗಳ ಹಿಂದೆ ಜಗಳ ನಡೆದು ಉಮೇಶ್ ಪತ್ನಿ ಸವಿತಾ(45) ಹಾಗೂ ಮಗ ಶಶಾಂಕ್(22) ಸೇರಿ ಆತನ ಕಾಲಿಗೆ ಹೊಡೆದು ಗಂಭೀರವಾಗಿ ಗಾಯಗೊಳಿಸಿದ್ದರು.
ಬಳಿಕ ಸಂಬಂಧಿಕರ ಸಹಾಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದರು. ಆದರೆ, ಚಾಪುರದೊಡ್ಡಿ ಗ್ರಾಮದಲ್ಲಿ ಶನಿವಾರ ಪಿತೃಪಕ್ಷ ಇರುವುದರಿಂದ ಪೂಜೆ ಪುರಸ್ಕಾರಗಳಲ್ಲಿ ಭಾಗಿಯಾಗಲು ಗುರುವಾರ ಸವಿತಾ ಮತ್ತು ಉಮೇಶ್ ಬಂದಿದ್ದರು. ಈ ವೇಳೆ ಮತ್ತೆ ಜಗಳ ನಡೆದಿದೆ. ಅಂತೆಯೇ ದೊಣ್ಣೆ ಹಾಗೂ ಮಚ್ಚುಗಳಿಂದ ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ.
ತೀವ್ರ ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಾವಿನ ವಿಷಯ ತಿಳಿಯುತ್ತಿದ್ದಂತೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಅನುಮಾನಗೊಂಡ ಸ್ಥಳೀಯರು ಮನೆಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಮದ್ದೂರು ಇನ್ಸ್‌ಪೆಕ್ಟರ್ ವೆಂಕಟೇಗೌಡ, ಬೆಸಗರಹಳ್ಳಿ ಪಿಎಸ್ಐ ಮಲ್ಲಪ್ಪ ಪರಿಶೀಲನೆ ನಡೆಸಿದರು. ಮಾತ್ರವಲ್ಲದೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


