ಕಬ್ಬನ್ ಪಾರ್ಕ್ ನಲ್ಲಿ ವಾಹನ ನಿಲುಗಡೆಗೆ ಅವಕಾಶ: ಪಾದಚಾರಿ, ಕಾರ್ಯಕರ್ತರ ವಿರೋಧ
ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಸಮಿತಿ ಕೈಗೊಂಡ ನಿರ್ಧಾರದ ಕುರಿತು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಸಮಿತಿ ಕೈಗೊಂಡ ನಿರ್ಧಾರದ ಕುರಿತು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಕ್ಟೋರಿಯಾ ಪ್ರತಿಮೆಯಿಂದ ಕೆಎಸ್‌ಎಲ್‌ಟಿಎ ನಡುವಿನ ರಸ್ತೆಯ ಒಂದು ಬದಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ನ್ಯಾಯಾಲಯಕ್ಕೆ ಭೇಟಿ ನೀಡುವವರ ವಾಹನಗಳ ನಿಲುಗಡೆಗೆ ಅನುಮತಿ ನೀಡಲು ಸಮಿತಿಯು ನಿರ್ಧಾರ ಕೈಗೊಂಡಿದೆ.
ಸಮಿತಿ ನಿರ್ಧಾರ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆಗೆ ಪತ್ರ ಬರೆದಿರುವ ರಾಜ್ಯ ಸರ್ಕಾರ, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುವಂತೆ ಸೂಚಿಸಿದೆ.
ಸರ್ಕಾರದಿಂದ ಪತ್ರ ಬಂದಿದ್ದು, ಎಲ್ಲ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಶೀಲಿಸುವಂತೆ ಸೂಚಿಸಲಾಗಿದೆ. ಆದರೆ, ಈ ವರೆಗೂ ಯಾವುದೇ ನಿರ್ಧಾರಗಳನ್ನೂ ಕೈಗೊಂಡಿಲ್ಲ ಎಂದು ತೋಟಗಾರಿಕಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಬ್ಬನ್ ಪಾರ್ಕ್ ನಲ್ಲಿ ಈಗಾಗಲೇ ಹಲವು ವಾಣಿಜ್ಯ ಪ್ರದೇಶಗಳಿವೆ. ಇದೀಗ ಮತ್ತೊಮ್ಮೆ ಪಾರ್ಕಿಂಗ್'ಗೆ ಅವಕಾಶ ನೀಡುವುದರಿಂದ ಅವ್ಯವಸ್ಥೆಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


