ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ದ ಅವಹೇಳನಕಾರಿ ಪೋಸ್ಟ್; ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಬಿಜೆಪಿಯ ಕರ್ನಾಟಕ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಪೊಲೀಸರಿಗೆ ದೂರು ನೀಡಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಬಿಜೆಪಿಯ ಕರ್ನಾಟಕ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ಪೊಲೀಸರಿಗೆ ದೂರು ನೀಡಿದೆ.
ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ 94 ಕೋಟಿ ರೂ. ನಗದು ಮತ್ತು 8 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಕಾಂಗ್ರೆಸ್‌ಗೆ ಸೇರಿದ್ದು ಎಂದು ಬಿಜೆಪಿಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಬಿಂಬಿಸಿದೆ ಎಂದು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಹೇಳಿದ್ದಾರೆ.
ಬಿಜೆಪಿಯವರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯ ಚಿತ್ರಗಳನ್ನು ತಿರುಚಿ ಕಳಪೆಯಾಗಿ ಬಿಂಬಿಸಿ ಜನರಲ್ಲಿ ಗೊಂದಲ ಮೂಡಿಸಿದ್ದಾರೆ ಎಂದು ದೂರಿದ್ದಾರೆ.
ಟ್ವಿಟರ್‌ನಲ್ಲಿನ ಕರ್ನಾಟಕ ಬಿಜೆಪಿ ಘಟಕದ ಮಾನಹಾನಿಕರ ಪೋಸ್ಟ್‌ಗಳನ್ನು ಅನೇಕ ಬಿಜೆಪಿ ನಾಯಕರು ಸಹ ಹಂಚಿಕೊಂಡಿದ್ದಾರೆ ಎಂದು ಮುಕುಂದರಾಜ್ ಆರೋಪಿಸಿದ್ದಾರೆ.
'ಐಟಿ ಇಲಾಖೆಯು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಾನು ವಶಪಡಿಸಿಕೊಂಡ ನಗದು ಸಚಿವರು ಅಥವಾ ಯಾವುದೇ ನಿರ್ದಿಷ್ಟ ವ್ಯಕ್ತಿಗೆ ಸೇರಿದ್ದು ಎಂದು ಎಲ್ಲಿಯೂ ಹೇಳಿಲ್ಲ. ತನಿಖೆ ಪೂರ್ಣಗೊಳ್ಳುವ ಮೊದಲೇ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ಹರಡಲು ಪ್ರಾರಂಭಿಸಿದೆ' ಎಂದು ಕಾಂಗ್ರೆಸ್ ನಾಯಕ ತಮ್ಮ ದೂರಿನಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


