ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಎಫ್ಐಆರ್ ದಾಖಲು
ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ತೀವ್ರ ಟೀಕೆಗೆ ಗುರಿಯಾಗಿದ್ದ ಸಾಹಿತಿ, ಚಿಂತಕ ಪ್ರೊ ಭಗವಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.

ಮೈಸೂರು: ಒಕ್ಕಲಿಗರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರಕ್ಕೆ ತೀವ್ರ ಟೀಕೆಗೆ ಗುರಿಯಾಗಿದ್ದ ಸಾಹಿತಿ, ಚಿಂತಕ ಪ್ರೊ ಭಗವಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ನೀಡಿದ ದೂರಿನ ಆಧಾರದ ಮೇಲೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಂಧನಕ್ಕೆ ಒತ್ತಾಯ: ಪ್ರೊ.ಭಗವಾನ್ ಅವರನ್ನು ಬಂಧಿಸಬೇಕೆಂದು ರಾಜ್ಯ ಒಕ್ಕಲಿಗರ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ. ಪ್ರೊ.ಭಗವಾನ್ ಅವರು ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೆಲವು ಹಿಂಬಾಲಕರನ್ನು ಖುಷಿಯಾಗಿಡಲು ಈ ರೀತಿ ಹೇಳಿಕೆ ನೀಡಿದ್ದಾರೆ.
ಒಕ್ಕಲಿಗ ಸಮುದಾಯದ ವಿರುದ್ಧ ಉದ್ದೇಶಪೂರ್ವಕವಾಗಿ ಮಾತನಾಡಿದ್ದಾರೆ. ಇದು ದೇಶದ ಸಹಬಾಳ್ವೆ ಒಗ್ಗಟ್ಟು ಒಡೆಯುವ ಕೆಲಸ. ಅದಕ್ಕೆ ದೇಶದ್ರೋಹಿ ಪ್ರಕರಣ ದಾಖಲಿಸುವಂತೆ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಗಂಗಾಧರ್ ಅವರು ದೂರು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಸದ್ಯ ಸೆಕ್ಷನ್ 153 ಅಡಿ ಗಲಾಟೆಗೆ ಪ್ರಚೋದನಕಾರಿಯಾಗುವಂತಹ ಭಾಷಣ. 153A ಎರಡು ಸಮುದಾಯದ ನಡುವೆ ಗಲಾಟೆ ಉಂಟು ಮಾಡುವುದು, ದ್ವೇಷ ಹೆಚ್ಚಿಸುವ ಆರೋಪದಡಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


