ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ, 1.3 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ
ಮಂಗಳೂರು ಸಮೀಪದ ದೇರಳಕಟ್ಟೆಯಲ್ಲಿ ಸಾರ್ವಜನಿಕರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಮಂಗಳೂರು: ಇಲ್ಲಿಗೆ ಸಮೀಪದ ದೇರಳಕಟ್ಟೆಯಲ್ಲಿ ಸಾರ್ವಜನಿಕರಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಅಬ್ದುಲ್ ಅಜೀಜ್ ಅಲಿಯಾಸ್ ಪೈಕರ್ ಅಜೀಜ್ (42) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಖಚಿತ ಮಾಹಿತಿ ಮೇರೆಗೆ ಸಿಸಿಬಿ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಆತನ ಬಳಿಯಿದ್ದ 1.3 ಲಕ್ಷ ಮೌಲ್ಯದ 26 ಗ್ರಾಂ ಎಂಡಿಎಂಎಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಲ್ಲದೆ, ಆತನಿಂದ ಒಂದು ಕಾರು, ಎರಡು ಮೊಬೈಲ್ ಫೋನ್ ಮತ್ತು ಎರಡು ಡಿಜಿಟಲ್ ತೂಕದ ಯಂತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 6.41 ಲಕ್ಷ ರೂ. ಆಗಿದೆ.
ಬಂಧಿತ ವ್ಯಕ್ತಿಯ ವಿರುದ್ಧ ಉಲ್ಲಾಳ, ಕಾವೂರು ಮತ್ತು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ(ಎನ್‌ಡಿಪಿಎಸ್) ಏಳು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


