ಬೆಳಗಾವಿ: ಡಿಸೆಂಬರ್ 4-15 ರವರೆಗೆ ಚಳಿಗಾಲ ಅಧಿವೇಶನ
ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರವರೆಗೂ ಚಳಿಗಾಲ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ,

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ 4ರಿಂದ 15ರವರೆಗೂ ಚಳಿಗಾಲ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರು, ಚಳಿಗಾಲ ಅಧಿವೇಶನ ಕುರಿತು ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 4ರಿಂದ 15ರ ವರೆಗೂ ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಸಿದ್ಧತೆ ನಡೆಸುವಂತೆ ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಹೇಳಿದರು.
ಇದನ್ನೂ ಓದಿ: ನವೆಂಬರ್ ನಿಂದ 10 ದಿನಗಳ ಕಾಲ ಚಳಿಗಾಲ ಅಧಿವೇಶನ?
ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬೀಳಲಿದೆ. ಈ ಬೆನ್ನಲ್ಲೇ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15 ರ ನಂತರ ಶೂನ್ಯ ಮಾಸ ಕಾರಣ ಈ ದಿನಗಳಲ್ಲಿ ಸರ್ಕಾರ ಅಧಿವೇಶನ ನಡೆಸಲ್ಲ. ಇನ್ನು ನವೆಂಬರ್ ನಲ್ಲಿ ದೀಪಾವಳಿ ರಜೆ, ಕನಕ ಜಯಂತಿ ಇರುವುದರಿಂದ ಅಧಿವೇಶನ ನಡೆಸಲು 10 ದಿನಗಳು ಸಿಗಲ್ಲ. ಈ ಎಲ್ಲಾ ಕಾರಣಗಳಿಂದ ಡಿಸೆಂಬರ್ 4 ರಿಂದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


