ಕ್ರಿಕೆಟ್ ಮೇಲಿನ ಆಸಕ್ತಿಯಿಂದ ನೋಡಲು ಹೋಗಿದ್ದೆ, ಎಚ್ಡಿಕೆ ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್ನಲ್ಲಿ ಏಕೆ ಉಳಿಯುತ್ತಿದ್ದರು?: ಸಿದ್ದರಾಮಯ್ಯ
ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿಯನ್ನು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೋಗಿ ವೀಕ್ಷಿಸಿದ್ದು ಸುದ್ದಿಯಾಗಿತ್ತು. ಇಬ್ಬರೂ ಯಾವ ತಂಡಕ್ಕೆ ಬೆಂಬಲ ನೀಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯುತ್ತಿದ್ದರು.

ಬೆಂಗಳೂರು: ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಾವಳಿಯನ್ನು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೋಗಿ ವೀಕ್ಷಿಸಿದ್ದು ಸುದ್ದಿಯಾಗಿತ್ತು. ಇಬ್ಬರೂ ಯಾವ ತಂಡಕ್ಕೆ ಬೆಂಬಲ ನೀಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಕಾಲೆಳೆಯುತ್ತಿದ್ದರು.
ಈ ಬಗ್ಗೆ ವಿಪಕ್ಷ ನಾಯಕ ಹೆಚ್ ಡಿ ಕುಮಾರಸ್ವಾಮಿ ಕೂಡ ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಕ್ರಿಕೆಟ್ ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹೋಗಿದ್ದೆ. ಹಾಗಾದರೆ ಎಚ್ ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್ ಹೋಟೆಲ್ನಲ್ಲಿ ಏಕೆ ಉಳಿದಿದ್ದರು ಎಂದು ಕೇಳಿದರು.
ಬೆಂಗಳೂರಿನ ಟೌನ್ ಹಾಲ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ನವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಆರೋಪ ಮಾಡುತ್ತಿರುವ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಎಲ್ಲಿದ್ದರು? ತಾಜ್ ವೆಸ್ಟೆಂಡ್ನಲ್ಲಿ ಏಕೆ ಇದ್ದರು? ಎಂದು ಪ್ರಶ್ನಿಸಿದರು.
ಸಿಎಂ ನಿವಾಸ ಕಾವೇರಿಯನ್ನು ನೀವು ಬಿಟ್ಟುಕೊಡದ ಕಾರಣಕ್ಕಾಗಿ ಅವರು ಅಲ್ಲಿದ್ದರಂತೆ ಎಂಬ ಮಾತಿಗೆ ತಿರುಗೇಟು ನೀಡಿದ ಅವರು, ಕುಮಾರಸ್ವಾಮಿ ಅವರು ಕಾವೇರಿ ನಿವಾಸವನ್ನು ಕೇಳಿದ್ದರೆ ಬಿಟ್ಟು ಕೊಡುತ್ತಿದ್ದೆ. ಬಿಎಸ್ ಯಡಿಯೂರಪ್ಪ ಅವರು ಕೊನೆಯವರೆಗೂ ಅಲ್ಲೇ ಇದ್ದರಲ್ವಾ? ಅದಕ್ಕೆ ಏನು ಹೇಳ್ತೀರಿ ಎಂದು ಮರು ಪ್ರಶ್ನಿಸಿದರು.
ಕಾವೇರಿ ನಿವಾಸವನ್ನು ಕೆಜೆ ಜಾರ್ಜ್ ಅವರಿಗೆ ನೀಡಲಾಗಿತ್ತು. ಜಾರ್ಜ್ ಅವರು ಅದನ್ನು ನನಗೆ ಬಿಟ್ಟು ಕೊಟ್ಟಿದ್ದರು. ಅದು ಸಿಎಂಗೆ ನಿಗದಿ ಮಾಡಿದ ಕ್ವಾಟರ್ಸ್ ಅಲ್ಲ ಎಂದರು.
ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಅಲ್ಲೇ ಕುಳಿತು ಸರ್ಕಾರ ಬೀಳಿಸಲು ಯತ್ನ ಮಾಡಿದ್ದೀರಿ ಎಂಬ ಆರೋಪದ ಬಗ್ಗೆ ಪ್ರಶ್ನೆಗೆ, ಇವತ್ತಿನವರೆಗೆ ಡಿಕೆಶಿ ಸರ್ಕಾರ ಬೀಳಿಸಿದರು ಎಂದು ಹೇಳಿದರು. ಇವಾಗ ನಾನು ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣನಾದೆ ಎಂದು ಆರೋಪ ಮಾಡ್ತೀದ್ದಾರೆ. ಕುಣಿಯಲಾಗದವರು ನೆಲಡೊಂಕು ಅಂದ ಹಾಗೆ ಏನೋನೇ ಆರೋಪ ಮಾಡುವುದು ಎಂದು ವಾಗ್ದಾಳಿ ನಡೆಸಿದರು.
ಮೈಸೂರು ದಸರಾ ಬಗ್ಗೆ ಮಾತನಾಡಿ. ವಿಜಯ ದಶಮಿ ಪೂಜೆಯಲ್ಲಿ ನಾಳೆ ಭಾಗಿಯಾಗುತ್ತೇನೆ. ಚಾಮುಂಡೇಶ್ವರಿ ಮೆರವಣಿಗೆಯ ಸಂದರ್ಭದಲ್ಲಿ ಪುಷ್ಪಾರ್ಚಣೆ ಮಾಡಲಾಗುವುದು ಎಂದರು. ಇನ್ನು ಕಿತ್ತೂರು ಉತ್ಸವಕ್ಕೆ ಅನುದಾನದ ಕೊರತೆ ಇಲ್ಲ. ಮಾಧ್ಯಮದವರೇ ಸುಮ್ಮನೇ ಅದನ್ನು ಸುದ್ದಿ ಮಾಡುತ್ತಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


