ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಈಜಲು ಹೋದ ವ್ಯಕ್ತಿ ವಿಭೂತಿಕೆರೆಯಲ್ಲಿ ಮುಳುಗಿ ಸಾವು

ಕುಡಿದ ಅಮಲಿನಲ್ಲಿ ಈಜಲು ಹೋದ 33 ವರ್ಷದ ವ್ಯಕ್ತಿಯೊಬ್ಬರು ವಿಭೂತಿಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರ ನಿವಾಸಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಅವರು ಬಾರ್ ಬೆಂಡಿಂಗ್ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಬೆಂಗಳೂರು: ಕುಡಿದ ಮತ್ತಿನಲ್ಲಿ ಈಜಲು ಹೋದ ವ್ಯಕ್ತಿ ವಿಭೂತಿಕೆರೆಯಲ್ಲಿ ಮುಳುಗಿ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ 33 ವರ್ಷದ ವ್ಯಕ್ತಿಯೊಬ್ಬರು ವಿಭೂತಿಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರ ನಿವಾಸಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಅವರು ಬಾರ್ ಬೆಂಡಿಂಗ್ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 

ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಈಜಲು ಹೋಗುವುದಾಗಿ ಮನೆಯವರಿಗೆ ತಿಳಿಸಿ ಹೊರಟಿದ್ದಾರೆ. ಅವರು ಹೊರಡುವ ಮುನ್ನ ಮದ್ಯ ಸೇವಿಸಿದರು ಎಂಬುದು ತಿಳಿದುಬಂದಿದೆ.

ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ದಾರಿಹೋಕರು ರಕ್ಷಣೆಗೆ ಬಂದರೂ ಅವರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.