ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ: ರೋಗಿ ಸ್ಥಳದಲ್ಲೇ ಸಾವು, ಐವರಿಗೆ ಗಾಯ
ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ಲಾರಿಗೆ ಆ್ಯಂಬುಲೆನ್ಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಆ್ಯಂಬುಲೆನ್ಸ್ನಲ್ಲಿದ್ದ ರೋಗಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಜಯ್ ಕುಮಾರ್ (40) ಎಂದು ಗುರ್ತಿಸಲಾಗಿದೆ. ಶಿಕ್ಷಕರಾಗಿರುವ ಇವರು, ಕಳೆದ ಮೂರು ವರ್ಷಗಳಿಂದ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆಂದು ಚಿತ್ರದುರ್ಗದಿಂದ ಕಿದ್ವಾಯಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿತ್ತು. ಈ ವೇಳೆ ನೆಲಮಂಗಲ ಸಮೀಪದ ಬೊಮ್ಮನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.
ಅಪಘಾತದ ವೇಳೆ ಆ್ಯಂಬುಲೆನ್ಸ್ ನಲ್ಲಿ ವಿಜಯ್ ಕುಮಾರ್ ಸೇರಿ ಒಟ್ಟು 6 ಮಂದಿ ಇದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಚಾಲಕ, ವಿಜಯ್ ಕುಮಾರ್ ಅವರ ನಾಲ್ವರು ಕುಟುಂಬಸ್ಥರು ಗಾಯಗೊಂಡಿದ್ದಾರೆ. ಗಾಯಾಳುಗಳು ನೆಲಮಂಗಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


