ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದ ಬಾಲಕ: ಸಮಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿ!
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಾಲಕ ಕೆಳಗೆ ಬಿದ್ದಿದ್ದು, ಈ ವೇಳೆ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯ ರಕ್ಷಣೆ ಮಾಡಿ ಸಮಯಪ್ರಜ್ಞೆ ಮೆರೆದ ಘಟನೆ ಮಂಗಳವಾರ ನಡೆದಿದೆ.
ಘಟನೆಯಲ್ಲಿ ಬಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲ್ವೇ ರಕ್ಷಣಾ ಪಡೆಯ ಸಿಬ್ಬಂದಿಗಳಿಗೆ ವಿವಿಧ ವಲಯಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ.
ರೈಲು ನಿಧಾನಗತಿಯಲ್ಲಿ ಚಲಿಸುತ್ತಿದ್ದು, ಈ ವೇಳೆ ಬಾಲಕ ರೈಲು ಮತ್ತು ಪ್ಲಾಟ್ ಫಾರ್ಮ್ ನಡುವೆ ಸಿಲುಕಿಕೊಂಡಿದ್ದಾನೆ. ಇದನ್ನು ಕಂಡ ಆರ್‌ಪಿಎಫ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ರೈಲಿನ ಸರಪಳಿ ಎಳೆಯುವಂತೆ ಪ್ರಯಾಣಿಕರಿಗೆ ತಿಳಿಸಿದ್ದಾರೆ. ರೈಲು ನಿಲ್ಲುತ್ತಿದ್ದಂತೆಯೇ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.
ಬಾಲಕ ತನ್ನ ಪೋಷಕರೊಂದಿಗೆ ರೈಲಿನ ಬಾಗಿಲಿನ ಬಳಿ ಬಂದು ತಿಂದಿದ್ದು, ಈ ವೇಳೆ ರೈಲಿನಿಂದ ಕೆಳಗೆ ಬಿದ್ದಿದ್ದಾನೆಂದು ತಿಳಿದುಬಂದಿದೆ. ಬಾಲಕನನ್ನು ರಕ್ಷಿಸುವಲ್ಲಿ ಆರ್ ಪಿಎಫ್ ಸಿಬ್ಬಂದಿ ಸುಲೋಚನಾ ಎಸ್ ಹಿರೇಮಠ ಪ್ರಮುಖ ಪಾತ್ರ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


