ವಿಜಯಪುರವಾದ ಬಿಜಾಪುರ: ಈಗ ಮತ್ತೆ ಜಿಲ್ಲೆಯ ಹೆಸರು ಬದಲಿಸಲು ಸರ್ಕಾರ ನಿರ್ಧಾರ!
2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ ಕಾಂಗ್ರೆಸ್ ಸರ್ಕಾರ ಮತ್ತೆ ಜಿಲ್ಲೆಗೆ ಹೊಸ ನಾಮಕರಣ ಮಾಡುವತ್ತ ಗಮನ ಹರಿಸಿದೆ.

ವಿಜಯಪುರ: 2014ರಲ್ಲಿ ಬಿಜಾಪುರವನ್ನು ವಿಜಯಪುರ ಎಂದು ಮರುನಾಮಕರಣ ಮಾಡಿದ ಕಾಂಗ್ರೆಸ್ ಸರ್ಕಾರ ಮತ್ತೆ ಜಿಲ್ಲೆಗೆ ಹೊಸ ನಾಮಕರಣ ಮಾಡುವತ್ತ ಗಮನ ಹರಿಸಿದೆ.
ಬಸವೇಶ್ವರರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನಲ್ಲಿ ಜನಿಸಿದರು, 12ನೇ ಶತಮಾನದ ಸಮಾಜ ಸುಧಾರಕರಾಗಿದ್ದ ಬಸವೇಶ್ವರರ ಹೆಸರನ್ನು ವಿಜಯಪುರಕ್ಕೆ ಮರುನಾಮಕರಣ ಮಾಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬ್ಲನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ ಬಸವೇಶ್ವರರ ಹೆಸರನ್ನು ಜಿಲ್ಲೆಗೆ ಮರುನಾಮಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಬಸವೇಶ್ವರರ ಕೊಡುಗೆಗಳನ್ನು ಪರಿಗಣಿಸಿ ಸರ್ಕಾರವು ಜಿಲ್ಲೆಯನ್ನು ‘ಬಸವೇಶ್ವರ ಜಿಲ್ಲೆ’ ಅಥವಾ ‘ಬಸವ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಬಯಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಚುನಾಯಿತ ಪ್ರತಿನಿಧಿಗಳು, ಗಣ್ಯರು, ಎನ್ಜಿಒಗಳು ಮತ್ತು ಸಾರ್ವಜನಿಕರ ಅಭಿಪ್ರಾಯವನ್ನು ಕೇಳಿದೆ. 15 ದಿನಗಳೊಳಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಸರ್ಕಾರ ಜನರಲ್ಲಿ ಮನವಿ ಮಾಡಿದೆ.
ಇದನ್ನೂ ಓದಿ: ವಿಶ್ವವಿಖ್ಯಾತ ಗೋಳಗುಮ್ಮಟಕ್ಕಿಲ್ಲ ಯುನೆಸ್ಕೋ ಸ್ಥಾನಮಾನ!
ಇದೇ ವೇಳೆ ಕಾಂಗ್ರೆಸ್, ದಲಿತ ಸಮುದಾಯದ ಕೆಲವರು ಸೇರಿದಂತೆ ಹಲವು ಮುಖಂಡರು, ಇತಿಹಾಸಕಾರರು ಜಿಲ್ಲೆಗೆ ಮತ್ತೆ ನಾಮಕರಣ ಮಾಡುವ ವಿಚಾರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದಾರೆ. ಇದು ಅನಗತ್ಯ ಎಂದಿರುವ ಅವರು, ಜಿಲ್ಲೆಯ ಹೆಸರನ್ನು ಮರುನಾಮಕರಣ ಮಾಡುವ ಬದಲು ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು. ಜಿಲ್ಲೆಯ ಹೆಸರನ್ನು ಮತ್ತೆ ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಇತಿಹಾಸಕಾರ, ಲೇಖಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷ್ಣ ಕೊಲ್ಹಾರ ಕುಲಕರ್ಣಿ ಅಭಿಪ್ರಾಯ ಪಟ್ಟಿದ್ದಾರೆ.
ಬಿಜಾಪುರ ಹೆಸರನ್ನು ವಿಜಯಪುರ ಎಂದು ಬದಲಾಯಿಸುವ ಸರ್ಕಾರದ ನಿರ್ಧಾರವನ್ನು ನಾನು ವಿರೋಧಿಸಿದ್ದೆ. ಮೂರು ಶತಮಾನಗಳಿಂದ ಈ ಪ್ರದೇಶವನ್ನು ಬಿಜಾಪುರ ಎಂದು ಗುರುತಿಸಲಾಗಿದೆ. ವಿನಾಕಾರಣ ವಿಜಯಪುರ ಎಂದು ಹೆಸರು ಬದಲಿಸಲಾಗಿದೆ. ಸರ್ಕಾರವು ಜಿಲ್ಲೆಯ ಹೆಸರನ್ನು ಮತ್ತೆ ಬದಲಾಯಿಸಲು ಬಯಸಿದೆ, ಇದು ತಪ್ಪು ಎಂದು ಪ್ರತಿಪಾದಿಸಿದ್ದಾರೆ.
ಬಸವೇಶ್ವರರು ಹುಟ್ಟಿದ ಬಸವನಬಾಗೇವಾಡಿ ತಾಲೂಕನ್ನು ಅಭಿವೃದ್ಧಿ ಪಡಿಸಬಹುದು. ಅವರ ಹೆಸರಲ್ಲಿ ಈಗಾಗಲೇ ‘ಬಸವ ಎಕ್ಸ್ ಪ್ರೆಸ್’ ರೈಲು ಇದ್ದು, ಇಲ್ಲಿನ ಹೊಸ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡುವ ಪ್ರಸ್ತಾವನೆ ಇದೆ. ಮತ್ತೆ ಜಿಲ್ಲೆಯ ಹೆಸರನ್ನು ಬದಲಾಯಿಸುವ ಅಗತ್ಯವಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


