ಬಿಎಂಟಿಸಿಯ ಶೇ. 40-50 ರಷ್ಟು ಚಾಲಕರಿಗೆ ಹೃದ್ರೋಗದ ಅಪಾಯವಿದೆ!
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ ಎಂದು ಗಮನಿಸಲಾಗಿದ್ದು, ಅವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಶೇ. 40-50 ರಷ್ಟು ಚಾಲಕರು ಹೃದ್ರೋಗದ ಅಪಾಯದಲ್ಲಿದ್ದಾರೆ ಎಂದು ಗಮನಿಸಲಾಗಿದ್ದು, ಅವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು, ಕಳೆದ 12 ರಿಂದ 13 ತಿಂಗಳಲ್ಲಿ ನಮ್ಮ ಆಸ್ಪತ್ರೆಯು 8,200 ಬಿಎಂಟಿಸಿ ಚಾಲಕರಿಗೆ ಹೃದಯ ಸಂಬಂಧಿ ಕಾಯಿಲೆಗಳ ತಪಾಸಣೆ ಮಾಡಿದೆ. ಹೃದಯ ಸಂಬಂಧಿ ಸಮಸ್ಯೆಗಳಿಗಾಗಿ ಚಾಲಕರ ತಪಾಸಣೆ ನಡೆಸಲು ಆಸ್ಪತ್ರೆಯು ಆಗಸ್ಟ್ 2022ರಲ್ಲಿ BMTC ಯೊಂದಿಗೆ ಒಪ್ಪಂದವೊಂದಕ್ಕೆ ಸಹಿ ಹಾಕಿತ್ತು ಎಂದು ತಿಳಿಸಿದ್ದಾರೆ.
ಎಲ್ಲಾ ಚಾಲಕರಿಗೂ ರಕ್ತ ಪರೀಕ್ಷೆ ಸೇರಿದಂತೆ ಹೃದಯದ ಒತ್ತಡ(ಟ್ರೆಡ್‌ಮಿಲ್) ಪರೀಕ್ಷೆ, ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್‌ಗಳೊಂದಿಗೆ (ಇಕೋ) ಸಮಗ್ರ ಆರೋಗ್ಯ ತಪಾಸಣೆ ನಡೆಸಲಾಗಿದೆ. 8,200 ಚಾಲಕರಿಗೆ ಆರೋಗ್ಯ ತಪಾಸಣೆ ಮಾಡಿದ್ದು, ಅವರಲ್ಲಿ ಶೇ. 40 ರಷ್ಟು ಚಾಲಕರು ಮಧುಮೇಹಿಗಳಾಗಿದ್ದಾರೆ ಮತ್ತು ಶೇ. 40 ರಷ್ಟು ಚಾಲಕರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಅಲ್ಲದೆ ಶೇ. 62 ರಷ್ಟು ಚಾಲಕರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ ಎಂದು ತಪಾಸಣೆಯಲ್ಲಿ ದೃಢಪಟ್ಟಿದೆ.
ಈಗಾಗಲೇ ಹೃದಯದಲ್ಲಿ ಬ್ಲಾಕೇಜ್ ನಂತಹ ಪರಿಸ್ಥಿತಿಗಳನ್ನು ಎದುರಿಸುತ್ತಿರುವ ಶೇಕಡಾ 5 ರಷ್ಟು ಚಾಲಕರಿಗೆ ವೈದ್ಯರಿಗೆ ಎಚ್ಚರಿಕೆ ನೀಡಿದ್ದಾರೆ. ಸುಮಾರು ಶೇ. 35 ರಷ್ಟು ಚಾಲಕರು ಧೂಮಪಾನಿಗಳಾಗಿರುವುದು ಎಂದು ಕಂಡುಬಂದಿದೆ.
ಚಾಲಕರು ಅನಿಯಮಿತ ಕೆಲಸದ ಸಮಯ, ಅಸಮರ್ಪಕ ಆಹಾರ ಸೇವನೆ, ವ್ಯಾಯಾಮದ ಕೊರತೆ ಮತ್ತು ದೂರದ ಪ್ರಯಾಣದ ಸಮಯದಲ್ಲಿ ನಿರಂತರವಾಗಿ ಕುಳಿತುಕೊಳ್ಳುವುದರಿಂದ ಆಯಾಸದಿಂದ ಹೃದಯ ಸಂಬಂಧಿ ಕಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಎಂದು ಡಾ. ಸಿ.ಎನ್ ಮಂಜುನಾಥ್ ಅವರು ವಿವರಿಸಿದ್ದಾರೆ.
ಇದೇ ರೀತಿಯ ಸಮಗ್ರ ಆರೋಗ್ಯ ತಪಾಸಣೆಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ನಡೆಸುವ ಪ್ರಸ್ತಾಪ ಮಾಡಲಾಗಿದೆ. ಏಕೆಂದರೆ ಅವರು ಹೃದಯ ಸಂಬಂಧಿ ಸಮಸ್ಯೆಗಳ ಅಪಾಯದಲ್ಲಿದ್ದಾರೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


