ರಾಜ್ಯ

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ

ಪಂಡಿತನಹಳ್ಳಿ ಗ್ರಾಮದ ಸಮೀಪದ ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ನವಿಲು ಭೇಟೆಯಾಡಿ ಅದರ ಮಾಂಸವನ್ನು ತಿನ್ನುತ್ತಿದ್ದ ಮೂವರು ಕಾರ್ಮಿಕರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು.

ತುಮಕೂರು: ನವಿಲು ಭೇಟೆಯಾಡಿ, ಮಾಂಸ ತಿಂದ ಮೂವರ ಬಂಧನ
ಬಂಧಿತ ಆರೋಪಿಗಳೊಂದಿಗೆ ಪೊಲೀಸರು
Published On :

ತುಮಕೂರು: ಜಿಲ್ಲೆಯ ಪಂಡಿತನಹಳ್ಳಿ ಗ್ರಾಮದ ಸಮೀಪದ ಮಾರನಾಯಕನಪಾಳ್ಯದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ನವಿಲು ಭೇಟೆಯಾಡಿ ಅದರ ಮಾಂಸವನ್ನು ತಿನ್ನುತ್ತಿದ್ದ ಮೂವರು ಕಾರ್ಮಿಕರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಒಡಿಶಾದ ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತ ಆರೋಪಿಗಳು. 

ಖಚಿತ ಮಾಹಿತಿ ಮೇರೆಗೆ ಆರ್‌ಎಫ್‌ಒ ಪವಿತ್ರಾ ಮತ್ತು ಡಿಆರ್‌ಎಫ್‌ಒ ರಬ್ಬಾನಿ ನೇತೃತ್ವದ ಅರಣ್ಯ ತಂಡ ಎಸ್‌ಆರ್‌ಎಸ್ ಇಟ್ಟಿಗೆ ಭಟ್ಟಿಯಲ್ಲಿರುವ ಶೆಡ್ ಮೇಲೆ ದಾಳಿ ನಡೆಸಿ, ನವಿಲಿನ ಮಾಂಸವನ್ನು ಪತ್ತೆ ಹಚ್ಚಿದೆ. 1.5 ಕೆ.ಜಿ ತೂಕದ ಮಾಂಸ, ಗರಿಗಳು, ಬಲೆ, ಅಡುಗೆ ಮಾಡಲು ಬಳಸಿದ್ದ ಪಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಮಾದರಿಗಳನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ.

ಈ ಮಧ್ಯೆ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.