ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಾಸಕರ ವಿರುದ್ಧ ಐಪಿಸಿ ಸೆಕ್ಷನ್ 504 (ಉದ್ದೇಶಪೂರ್ವಕವಾಗಿ ಯಾರನ್ನಾದರೂ ಅವಮಾನಿಸುವುದಕ್ಕೆ ಶಿಕ್ಷೆ) ಮತ್ತು 505 (2) (ವರ್ಗಗಳ ನಡುವೆ ದ್ವೇಷ ಸೃಷ್ಟಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯ ಮೂಲಗಳು ಖಚಿತಪಡಿಸಿವೆ.
ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಮತ್ತು ಅವರ ಅಧಿಕೃತ ನಿವಾಸದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಎರಡಲ್ಲೂ 'ಕಲೆಕ್ಷನ್ ಮಾಸ್ಟರ್ (ಸಿಎಂ) ಕರ್ನಾಟಕ' ಎಂಬ ಶೀರ್ಷಿಕೆ ನೀಡಿದ್ದರು.
ಸರ್ಕಾರಕ್ಕೆ ಉದ್ದೇಶಪೂರ್ವಕವಾಗಿ ಮಾನಹಾನಿ ಮಾಡಲು ಮತ್ತು ಅವಮಾನಿಸಲು ಶಾಸಕರು ಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ (ಡಿಕೆಝಡ್‌ಪಿ) ಮಾಜಿ ಸದಸ್ಯ ಶೇಖರ್ ಕುಕ್ಕೇಡಿ ಅವರು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


