ಬೆಂಗಳೂರು: ವಿದ್ಯುತ್ ಕಂಬ, ಬೈಕ್ ಗೆ ಡಿಕ್ಕಿ ಹೊಡೆದ ಬೆಂಜ್ ಕಾರು, ಸವಾರ ಸಾವು
ಮರ್ಸಿಡಿಸ್ ಬೆಂಜ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ನಡೆದಿದೆ.

ಬೆಂಗಳೂರು: ಮರ್ಸಿಡಿಸ್ ಬೆಂಜ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬ ಹಾಗೂ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ರಾಜೇಂದ್ರ(46) ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮರ್ಸಿಡಿಸ್ ಬೆಂಜ್ ಕಾರು ಗೊಯೇಲ್ ಎಜುಕೇಷನ್ ಟ್ರಸ್ಟ್ ಗೆ ಸೇರಿದ್ದು, ಮುಂದೆ ಚಲಿಸುತ್ತಿದ್ದ ಬೈಕ್ ಗೆ ಹಿಂಬಂದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಾಜೇಂದ್ರ ಅವರು ಕಾರಿನ ಮೇಲೆ ಬಂದು ಬಿದ್ದಿದ್ದಾರೆ.
ಅಪಘಾತ ಬಳಿಕ ಕಾರಿನ ಚಾಲಕ ಬೈಕ್ ಸವಾರನನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ರಾಜೇಂದ್ರ ಅವರು ಸಾವನ್ನಪ್ಪಿದ್ದಾರೆ.
ಚಿಕ್ಕಲಸಂದ್ರ ನಿವಾಸಿಯಾಗಿರುವ ಮೃತ ರಾಜೇಂದ್ರ ಅವರು ಗೊಟ್ಟಿಗೆರೆಯಲ್ಲಿ ಫ್ಯಾಬ್ರಿಕೇಷನ್ ಶಾಪ್ ಹೊಂದಿದ್ದು, ಕೋಣನಕುಂಟೆ ಕ್ರಾಸ್ ನಿಂದ ಗೊಟ್ಟಿಗೆರೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಈ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


