ರಾಜ್ಯ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಇಂದು (ಭಾನುವಾರ) ಘೋಷಿಸಿದೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆ; ಐವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಇಂದು (ಭಾನುವಾರ) ಘೋಷಿಸಿದೆ. 

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ನೀಡಿರುವ ಅಧಿಕೃತ ಪ್ರಕಟಣೆಯಲ್ಲಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆಕೆ ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿಟಿ ಶ್ರೀನಿವಾಸ್ ಮತ್ತು ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ ಬಿ ಪಾಟೀಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. 

Story image

ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ. 

ಈ ವರ್ಷದ ಆರಂಭದಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.