ರಾಜ್ಯ

​ಆಂತರಿಕ ಕಿತ್ತಾಟದಿಂದಲೇ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ: ನಳಿನ್‌ ಕುಮಾರ್‌ ಕಟೀಲ್

ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ ಶುರುವಾಗಿದ್ದು, ಮೂರು ತಂಡಗಳು ಗಲಾಟೆ ಮಾಡುತ್ತಿವೆ. ಆಂತರಿಕ ಕಲಹದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

​ಆಂತರಿಕ ಕಿತ್ತಾಟದಿಂದಲೇ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ: ನಳಿನ್‌ ಕುಮಾರ್‌ ಕಟೀಲ್
ನಳಿನ್‌ ಕುಮಾರ್‌ ಕಟೀಲ್
Published On :

ಮಂಗಳೂರು: ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ ಶುರುವಾಗಿದ್ದು, ಮೂರು ತಂಡಗಳು ಗಲಾಟೆ ಮಾಡುತ್ತಿವೆ. ಆಂತರಿಕ ಕಲಹದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ ಡಾ. ಪರಮೇಶ್ವರ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್‌ ವಿಚಾರ ಪ್ರಸ್ತಾಪಿಸಿದರು.

ಸಿಎಂ ಸಿದ್ಧರಾಮಯ್ಯ ತಂಡ, ಡಿಸಿಎಂ ಡಿಕೆ ಶಿವಕುಮಾರ್ ತಂಡ ಮತ್ತು ಸಚಿವ ಸತೀಶ್ ಜಾರಕಿಹೊಳಿ ತಂಡ ಕೆಲಸ ಮಾಡುತ್ತಿದೆ. ಇದರ ಹಿನ್ನೆಲೆಯಲ್ಲಿ ನಿನ್ನೆ ಡಿನ್ನರ್ ಮೀಟಿಂಗ್​ ನಡೆದಿದೆ. ಕಾಂಗ್ರೆಸ್​ನ ಆಂತರಿಕ ಜಗಳದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ ಎಂದು ಹೇಳಿದರು.

ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್​ಗಳನ್ನು ಹಾಕಲಾಗುತ್ತಿದೆ. ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೂ ಕೇಸ್ ಹಾಕಲಾಗುತ್ತಿದೆ. ಜನಪ್ರತಿನಿಧಿಗಳ ಮೇಲೂ ಕೇಸ್ ಹಾಕಿ ಅವರ ಹಕ್ಕು ಕಸಿಯಲಾಗುತ್ತಿದೆ ಎಂದು ಆರೋಪಿಸಿದರು.

ಕೋಲಾರ ಸಂಸದ ಮುನಿಸ್ವಾಮಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ‌ ಕೇಸ್​ ಹಾಕಲಾಗಿದೆ. ಸರ್ಕಾರ ಪೊಲೀಸ್ ಇಲಾಖೆ ಬಳಸಿಕೊಂಡು ಎಫ್​ಐಆರ್​​ ದಾಖಲಿಸಿದೆ. ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ಬರೆದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ತಿಂಗಳ ಒಳಗೆ ಎರಡನೇ ಎಫ್​ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ದೇಶಭಕ್ತರ ವಿರುದ್ಧ ಕೇಸ್​ಗಳು‌ ಜಾಸ್ತಿಯಾಗುತ್ತಿವೆ. ಆದರೆ, ದೇಶ ವಿರೋಧಿಗಳ ಮೇಲೆ ಒಂದೇ ಒಂದು ಕೇಸ್ ಹಾಕಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.