ಬೆಂಗಳೂರು: ಹೋಟೆಲ್, ಬಾರ್ ಗಳಲ್ಲಿ ಇನ್ನು ಮುಂದೆ ಸಿಸಿಟಿವಿ ಅಳವಡಿಕೆ ಕಡ್ಡಾಯ!
ಸುರಕ್ಷತೆ ದೃಷ್ಟಿಯಿಂದ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಅಂಗಡಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ವಾಣಿಜ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಸುರಕ್ಷತೆ ದೃಷ್ಟಿಯಿಂದ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಅಂಗಡಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ವಾಣಿಜ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಹೇಳಿದರು.
ಯಲಹಂಕ ಉಪನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಈಶಾನ್ಯ ವಿಭಾಗದ ಪೊಲೀಸರು ಶನಿವಾರ ಆಯೋಜಿಸಿದ್ದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ನಾಗರೀಕರ ಅಹವಾಲು ಆಲಿಸಿದ ಬಳಿಕ ಪೊಲೀಸ್ ಆಯುಕ್ತರು ಮಾತನಾಡಿದರು.
ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಪ್ರಕಾರ 100ಕ್ಕೂ ಹೆಚ್ಚು ಸಾರ್ವಜನಿಕರು ಬರುವ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ನಿಯಮವಿದೆ. ಸಿಸಿಟಿವಿ ಕ್ಯಾಮೆರಾಗಳನ್ನೂ ಪೋಲೀಸರ ಮಾರ್ಗದರ್ಶನದಲ್ಲಿ ಅಳವಡಿಸಬೇಕು. ರಸ್ತೆ ಸುತ್ತಮುತ್ತಲಿನ ಪ್ರದೇಶಗಳು ಕಾಣುವಂತೆ, ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಅವುಗಳು ಹೆಚ್ಚು ಕ್ವಾಲಿಟಿ ಇರಬೇಕು, ಸ್ಟೋರೇಜ್ ಹೆಚ್ಚಾಗಿ ಇರಬೇಕು, ಕ್ಯಾಮೆರಾ ಯಾವ ಕಡೆ ಇರಬೇಕು, ನಿರ್ವಹಣೆ ಮಾಡುವುದರ ಬಗ್ಗೆ ಪೋಲೀಸರು ಸಲಹೆ ನೀಡುತ್ತಾರೆ. ಒಂದು ಸಿಸಿಟಿವಿ, ಒಬ್ಬರು ಪೋಲೀಸ್ ಸಿಬ್ಬಂದಿ ಇದ್ದಂತೆ ಎಂದು ಹೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ರಸ್ತೆಗಳಲ್ಲಿ ವಾಹನ ನಿಲುಗಡೆ, ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಹೋಟೆಲ್, ರೆಸ್ಟೋರೆಂಟ್‍ಗಳ ಬಗ್ಗೆ ಸಾಕಷ್ಟು ದೂರು ಹೇಳಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಲು ಸ್ಥಳೀಯ ಪೋಲೀಸರಿಗೆ ಆಯುಕ್ತರು ಆದೇಶಿಸಿದರು.
ಇನ್ನು ಬೇಕರಿಗಳ ಬಗ್ಗೆ ಬಹಳಷ್ಟು ದೂರುಗಳು ಕೇಳಿ ಬಂದಿದ್ದು, ಬೇಕರಿ ಬಳಿ ಧೂಮಪಾನ ಮಾಡುವುದು, ಪಡ್ಡೆ ಹುಡುಗರು ಅಲ್ಲಿ ಅಡ್ಡ ಮಾಡಿಕೊಂಡು ಹೆಣ್ಣುಮಕ್ಕಳಿಗೆ ಚುಡಾಯಿಸುವ ಚಾಳಿ ಹೆಚ್ಚಾಗಿದೆ ಎಂದು ಆಯುಕ್ತರ ಮುಂದೆ ಸಾರ್ವಜನಿಕರು ಅಳಲು ತೋಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ದಯಾನಂದ ಅವರುಸ ಈ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳು ಬಂದಿದ್ದು, ಬೇಕರಿಗಳ ಬಳಿ ಧೂಮಪಾನ ನಿಷೇಧಿಸಲಾಗಿದೆ. ಎಲ್ಲಾ ಬೇಕರಿಗಳ ಬಳಿ ಧೂಮಪಾನ ನಿಷೇಧ ಬೊರ್ಡ್ ಅಳವಡಿಸುವಂತೆ ಬೇಕರಿ ಮಾಲೀಕರಿಗೆ ಸೂಚಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಆದೇಶಿಸಿದರು.
ಮಾದಕ ವಸ್ತು ಜಾಲದ ಬಗ್ಗೆ ನಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿ ತಿಂಗಳ ಕೊನೆಯ ದಿನ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಡ್ರಗ್ಸ್ ಜಾಲದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆಂದು ಆಯುಕ್ತರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


