ಹಂಪಿಯಲ್ಲಿ ಮಹಿಳೆಯೊಂದಿಗೆ ಅನುಚಿತ ವರ್ತನೆ: ಅನಧಿಕೃತ ಪ್ರವಾಸಿ ಮಾರ್ಗದರ್ಶಿ ಬಂಧನ
ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜತೆಗೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಹಂಪಿ: ಮಹಾರಾಷ್ಟ್ರದ ಪ್ರವಾಸಿ ಮಹಿಳೆಯ ಜತೆಗೆ ಅನುಚಿತವಾಗಿ ವರ್ತಿಸಿದ ಅನಧಿಕೃತ ಪ್ರವಾಸಿ ಮಾರ್ಗದರ್ಶಿಯೊಬ್ಬನನ್ನು ಹಂಪಿ ಪ್ರವಾಸೋದ್ಯಮ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಾರುತಿ ಅಂಜನಿ (30) ಎಂದು ಗುರ್ತಿಸಲಾಗಿದೆ. ಮಹಾರಾಷ್ಟ್ರದ ಮೀರಾನಗರದಿಂದ ಮಹಿಳಾ ಪ್ರವಾಸಿ ಮಾರುತಿ ಎಂಬುವವರ ವಿರುದ್ಧ ದೂರು ನೀಡಿದ್ದು, ಆತನೊಂದಿಗೆ ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಬಂದಾಗ, ಅಲ್ಲಿದ್ದ ಸಿಬ್ಬಂದಿ ತಮಗೆ ಬೆಂಬಲ ನೀಡದೆ ಆರೋಪಿಗೇ ನೆರವಾಗುವ ರೀತಿಯಲ್ಲಿ ವರ್ತಿಸಿದರು. ಹೀಗಾಗಿ ಇಲಾಖೆಯ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.
‘ವ್ಯಕ್ತಿಯಿಂದ ನನಗೆ ಅನ್ಯಾಯವಾಗಿದೆ ಎಂದು ಹೇಳಲು ನಾನು ಆತನನ್ನು ಇಲಾಖೆಯ ಕಚೇರಿಗೆ ಕರೆತಂದೆ. ಆದರೆ ಅಲ್ಲಿನ ಇಬ್ಬರು ಸಿಬ್ಬಂದಿ ನನಗೆ ನೆರವಾಗುವ ಬದಲಿಗೆ ಆರೋಪಿಗೇ ನೆರವಾದರು. ಆರೋಪಿ ಮದ್ಯ ಸೇವಿಸಿದ್ದ. ಆತನನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವ ನಾಟಕವಾಡಿ ಆತ ಪಲಾಯನ ಮಾಡುವಂತೆ ಮಾಡಿದರು. ಬೈಕ್ ಸಹ ಒದಗಿಸಿಕೊಟ್ಟರು. ಇದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ವ್ಯಕ್ತಿಗೆ ನೆರವಾದ ಇಲಾಖೆಯ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಬೇಕು, ಏನು ಕ್ರಮ ಕೈಗೊಂಡಿದ್ದೀರಿ ಎಂಬ ಬಗ್ಗೆ ನನಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದ್ದಾರೆ.
ಮಹಿಳೆ ದೂರು ನೀಡಲು ಬಂದಾಗ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಅವರು ಕಚೇರಿಯಲ್ಲಿ ಇರಲಿಲ್ಲ. ಕರ್ನಾಟಕ–50 ವೈಭವ ಕುರಿತಂತೆ ಜಿಲ್ಲಾಧಿಕಾರಿ ಅವರು ಕರೆದಿದ್ದ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲು ಹೊಸಪೇಟೆಗೆ ಹೋಗಿದ್ದರು. ಅವರು ವಾಪಸ್ ಬಂದಾಗ ವಿಷಯ ಗೊತ್ತಾಗಿದ್ದು, ಬಳಿಕ ಹಂಪಿ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆಯ ಹೇಳಿಕೆ ಆಧರಿಸಿ ಅನಧಿಕೃತ ಪ್ರವಾಸಿ ಮಾರ್ಗದರ್ಶಿ ಮಾರುತಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಾರುತಿ ತನ್ನನ್ನು ಪ್ರವಾಸಿ ಮಾರ್ಗದರ್ಶನೆಂದು ಪರಿಚಯಿಸಿಕೊಂಡಿದ್ದು, ಹೀಗಾಗಿ ಅವರ ಸೇವೆಯನ್ನು ಮಹಿಳೆ ಒಪ್ಪಿಕೊಂಡಿದ್ದರು. ಪ್ರವಾಸಿಗರು ಅನಧಿಕೃತ ಪ್ರವಾಸಿ ಮಾರ್ಗದರ್ಶಕರ ಬಗ್ಗೆ ಎಚ್ಚರದಿಂದ ಇರಬೇಕು. ಪ್ರವಾಸಿಗರಿಗೆ ಮಾರ್ಗದರ್ಶಕರ ಸೇವೆಯ ಅಗತ್ಯವಿದ್ದಲ್ಲಿ, ಅವರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಭುಲಿಂಗ ತಳಕೇರಿ ಹೇಳಿದ್ದಾರೆ.
ವ್ಯಕ್ತಿಯ ವಿರುದ್ಧ ವಿರುದ್ಧ ಐಪಿಸಿ ಸೆಕ್ಷನ್ 509 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ. ಅಸಡ್ಡೆಯಿಂದ ವರ್ತಿಸಿದ ಮೂವರು ಸಿಬ್ಬಂದಿಗಳಿಗೂ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


