ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಬೆಳಗಾವಿವರೆಗೆ ವಿಸ್ತರಿಸಿ: ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಬೆಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೂ ವಿಸ್ತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಬೆಂಗಳೂರಿನಿಂದ ಹುಬ್ಬಳ್ಳಿ ಧಾರವಾಡದವರೆಗೆ ಇರುವ ವಂದೇ ಭಾರತ್ ರೈಲು ಸಂಪರ್ಕವನ್ನು ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ವಂದೇ ಭಾರತ್ ರೈಲು ಸಂಪರ್ಕ ವಿಸ್ತರಣೆಯಿಂದ ಬೆಳಗಾವಿ ಜಿಲ್ಲೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದಿದ್ದಾರೆ.
ಬೆಳಗಾವಿ ಜಿಲ್ಲೆಯ ತನಕ ವಿಸ್ತರಣೆ ಮಾಡಿದರೆ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೂ ಉತ್ತಮ ಸಂಪರ್ಕ ಕಲ್ಪಿಸಲು ಅನುಕೂಲವಾಗಲಿದೆ. ಹೀಗಾಗಿ ವಂದೇ ಭಾರತ್ ರೈಲು ಸಂಪರ್ಕವನ್ನು ಹುಬ್ಬಳ್ಳಿ – ಧಾರವಾಡದಿಂದ ಬೆಳಗಾವಿ ತನಕ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


