ಎಫ್‌ಡಿಎ ಪರೀಕ್ಷೆ ಹಗರಣ: ಪ್ರಿಯಾಂಕ್ ಖರ್ಗೆ ಮೂಗಿನಡಿಯಲ್ಲಿ ಅಕ್ರಮ ನಡೆದಿದೆ; ಬಿಜೆಪಿ ಆರೋಪ
ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿಗಳ ಜೊತೆ ಸರ್ಕಾರ ಶಾಮೀಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಬೆಂಗಳೂರು: ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿಗಳ ಜೊತೆ ಸರ್ಕಾರ ಶಾಮೀಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು, ಹಗರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಜೊತೆಗೆ ಪ್ರಿಯಾಂಕ್ ಖರ್ಗೆಯೂ ಶಾಮೀಲಾಗಿದ್ದಾರೆಂದು ಆರೋಪಿಸಿದ್ದಾರೆ.
ರುದ್ರಗೌಡ ಪಾಟೀಲ್ ಜಮೀನು ಮೇಲೆ ಬಂದು ಮತ್ತೆ ಅಕ್ರಮವೆಸಗಿದ್ದಾನೆ. ಪಾಟೀಲ್ ಪರೀಕ್ಷಾ ಅಕ್ರಮ ನಡೆಸುವುದನ್ನು ಈತ ಹವ್ಯಾಸ ಮಾಡಿಕೊಂಡಿದ್ದಾನೆ. ಅಕ್ರಮದ ಮಾಹಿತಿ ಬಂತು ಎಂದು ಪರೀಕ್ಷೆ ತಡೆದಿರುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅವರಿಗೇನೂ ಮಾಹಿತಿ ಬಂದಿಲ್ಲ. ಆದರೆ, ರುದ್ರಗೌಡ ಪಾಟೀಲ್ನ ಅಕ್ರಮಕ್ಕೆ ಸರ್ಕಾರದ ಕುಮ್ಮಕ್ಕು, ಸಹಕಾರ ಇದೆ. ಈ ಸರ್ಕಾರದಲ್ಲಿ ಪ್ರತಿಭಾವಂತ ಅಭ್ಯರ್ಥಿಗಳಿಗೆ ಮೋಸ ಆಗುತ್ತಿದೆ. ಕೆಇಎ ಪರೀಕ್ಷಾ ಅಕ್ರಮ ಹೊಣೆಯನ್ನು ಸಚಿವರೇ ಹೊತ್ತುಕೊಳ್ಳಬೇಕು. ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ಅವರು ಮಾತನಾಡಿ, ಬಿಜೆಪಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.
ಪಾಟೀಲ್ ಸೇರಿದಂತೆ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಇದೇ ವೇಳೆ ಒತ್ತಾಯಿಸಿದರು.
‘ಅಧಿಕಾರಿಗಳು, ಸಚಿವರ ಸಹಕಾರವಿಲ್ಲದೆ ಅಕ್ರಮ ನಡೆಯುವುದಿಲ್ಲ, ಎಫ್‌ಡಿಎ ಪರೀಕ್ಷೆಯಲ್ಲಿ 20 ಮಂದಿಗೆ ಕೆಇಎ ಒಂದು ಗಂಟೆ ಹೆಚ್ಚುವರಿ ಸಮಯ ನೀಡಿದ್ದು ಏಕೆ? ಇದೂವರೆಗೆ ಒಂಬತ್ತು ಮಂದಿಯನ್ನು ಮಾತ್ರ ಬಂಧಿಸಲಾಗಿದೆ. ಪಾಟೀಲ್ ಅವರನ್ನು ಇನ್ನೂ ಏಕೆ ಎತ್ತಂಗಡಿ ಮಾಡಿಲ್ಲ? ಅದಕ್ಕೆ ಕಾರಣ ಅವರು ನಿಮ್ಮ ಪಕ್ಷದ ಕಾರ್ಯಕರ್ತನಾಗಿರುವುದು ಎಂದು ಕಿಡಿಕಾರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


