ಗಣಪತಿ ಸಚ್ಚಿದಾನಂದ ಸ್ವಾಮೀಜಿಗೆ ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪ್ರದಾನ
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬೆಂಗಳೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವದ ಅಂಗವಾಗಿ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ನಂತರ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, ಭಾರತೀಯ ಸಂಸ್ಕೃತಿಯು ಜ್ಞಾನ, ವಿಜ್ಞಾನ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಒಳಗೊಂಡಿದೆ. ಹೆಸರಾಂತ ಶಾಸ್ತ್ರೀಯ ಸಂಗೀತ ಗಾಯಕಿ, ಗೌರವಾನ್ವಿತ ಗಂಗೂಬಾಯಿ ಹಾನಗಲ್ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾಲಯವು ಸಂಸ್ಕೃತಿ, ಕಲೆ ಮತ್ತು ಸಂಗೀತದ ಅಮೂಲ್ಯ ಪರಂಪರೆಯನ್ನು ಮುನ್ನಡೆಸುವಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದರು.
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಶಿಕ್ಷಣ, ಕಲೆ, ಸಂಗೀತ ಮತ್ತು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಹನೀಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಅದರಂತೆ ಈ ದಿನ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿರುವುದು ಧನ್ಯತಾ ಭಾವವನ್ನು ತುಂಬಿದೆ ಎಂದರು.
ಸಂಗೀತ ಕ್ಷೇತ್ರದಲ್ಲಿನ ಅಪಾರ ಕೊಡುಗೆಗಾಗಿ ಸ್ವಾಮೀಜಿಯವರಿಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ವರ್ಲ್ಡ್ ಕ್ಲಾಸಿಕಲ್ ತಮಿಳು ವಿಶ್ವವಿದ್ಯಾಲಯ, ಲಂಡನ್ ವತಿಯಿಂದ ಸ್ವಾಮೀಜಿಗಳಿಗೆ ಶ್ರೀ ಡಾಕ್ಟರ್ ಆಫ್ ಲೆಟರ್ಸ್ ಗೌರವ ಪದವಿ ನೀಡಿ ಗೌರವಿಸಿದೆ. ಈ ಎಲ್ಲಾ ಗೌರವಗಳಿಗೆ ಭಾಜನರಾಗಿರುವ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: ಇಸ್ರೋ ಅಧ್ಯಕ್ಷ ಸೋಮನಾಥ್, ಬ್ಯಾಂಕ್ ಜನಾರ್ಧನ್, ಡಿಂಗ್ರಿ ನಾಗರಾಜ್ ಸೇರಿ 68 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ಸ್ವಾಮೀಜಿಯವರು ತಮ್ಮ ಚಿಕಿತ್ಸಕ ಮತ್ತು ಧ್ಯಾನ ಸಂಗೀತದ ಜೊತೆಗೆ ಪ್ರಾಚೀನ ವೈದಿಕ ಸಂಪ್ರದಾಯಗಳನ್ನು ಉತ್ತೇಜಿಸುವ ದಿವ್ಯ ಕೆಲಸವನ್ನು ಮಾಡುತ್ತಿದ್ದಾರೆ. ದತ್ತಪೀಠವು ಇಂದು ವೇದಗಳ ಅಧ್ಯಯನದ ಪ್ರಮುಖ ಕೇಂದ್ರವಾಗಿದೆ. ಇಷ್ಟೇ ಅಲ್ಲ, ನಮ್ಮ ಪೂರ್ವಜರು ನಮಗೆ ನೀಡಿದ ಹಾಡು, ಸಂಗೀತ, ಕಂಠದ ಶಕ್ತಿಯನ್ನು ಜನರ ಆರೋಗ್ಯಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಪರಿಣಾಮಕಾರಿ ಆವಿಷ್ಕಾರಗಳನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕುಲಪತಿ, ಪ್ರಾಧ್ಯಾಪಕ ನಾಗೇಶ್ ವಿ.ಬೆಟ್ಟಕೋಟೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


