ರಾಜ್ಯ

ಕೆಎಸ್ ಆರ್ ಟಿಸಿ ಸಾರಿಗೆ ಸಿಬ್ಬಂದಿಗೆ ಪರಿಹಾರ ಮೊತ್ತ ಮೂರು ಪಟ್ಟು ಹೆಚ್ಚಳ!

ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.

ಕೆಎಸ್ ಆರ್ ಟಿಸಿ ಸಾರಿಗೆ ಸಿಬ್ಬಂದಿಗೆ ಪರಿಹಾರ ಮೊತ್ತ ಮೂರು ಪಟ್ಟು ಹೆಚ್ಚಳ!
ಕೆಎಸ್ ಆರ್ ಟಿಸಿ ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ಅಪಘಾತದಲ್ಲಿ ಸಾವನ್ನಪ್ಪಿದ್ದ ಸಾರಿಗೆ ಸಿಬಂದಿ ಅವಲಂಬಿತರಿಗೆ ಒಂದು ಕೋಟಿ ರೂ. ವಿಮಾ ಪರಿಹಾರ ನೀಡುವ ಕೆಎಸ್ ಆರ್ ಟಿಸಿ ಇದೀಗ ನಿಗಮದ ನೌಕರರಿಗೆ ನೀಡಲಾಗುವ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಿಸಿದೆ.

ನವೆಂಬರ್ 1 ರಿಂದಲೇ ಇದು ಅನ್ವಯ ಆಗಲಿದೆ. ಅಪಘಾತ ಹೊರತುಪಡಿಸಿ ಇತರ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್,ಪಾರ್ಶ್ವವಾಯು, ಹೃದಯಘಾತ, ಮೂತ್ರ ಪಿಂಡ ವೈಫಲ್ಯ ಮತ್ತಿತರ ಕಾರಣಗಳಿಂದ ಪ್ರತಿ ರ್ಷ 100 ನೌಕರರು ಮೃತಪಡುತ್ತಿದ್ದಾರೆ. ಇಂತಹ ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು  ಈ ಮೊದಲು ನೀಡುತ್ತಿದ್ದ 3 ಲಕ್ಷ ರೂ. ಪರಿಹಾರ ಮೊತ್ತವನ್ನು ರೂ. 10 ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಈ ಯೋಜನೆಗೆ ನೌಕರರು ಮಾಸಿಕ ವಂತಿಕೆಯನ್ನು ಪ್ರಸ್ತುತ ರೂ. 100 ರಿಂದ ರೂ. 200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ.ಗಳ ವಂತಿಕೆಯನ್ನು ರೂ.100ಗಳಿಗೆ ಪರಿಷ್ಕರಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.