ಬೆಳಗಾವಿ: ಮನೆ ಮುಂದಿದ್ದ ಕಸ ತೆಗೆಯಲು ಹೋಗಿ ವಿದ್ಯುತ್ ಸ್ಪರ್ಶ; ತಂದೆ-ಮಗ ದಾರುಣ ಸಾವು
ಮನೆಯ ಮುಂದಿದ್ದ ವಿದ್ಯುತ್ ಕಂಬದ ತಂತಿ ತಗುಲಿ ತಂದೆ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ: ಮನೆಯ ಮುಂದಿದ್ದ ವಿದ್ಯುತ್ ಕಂಬದ ತಂತಿ ತಗುಲಿ ತಂದೆ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಪ್ರಭು ಹುಂಬಿ (69) ಮತ್ತು ಪುತ್ರ ಮಂಜುನಾಥ (35) ಎಂದು ಗುರುತಿಸಲಾಗಿದೆ. ಶುಕ್ರವಾರ ಮನೆ ಮುಂದಿನ ಹುಲ್ಲು ತೆಗೆಯುವ ವೇಳೆ ವಿದ್ಯುತ್ ತಗುಲಿ ತಂದೆ, ಮಗ ಸಾವಿಗೀಡಾಗಿದ್ದಾರೆ.
ಮನೆಯ ಮುಂದೆ ಬಿದ್ದಿದ್ದ ಕಸವನ್ನು ತೆಗೆಯಲು ಹೋದಾಗ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿದೆ. ಮೊದಲು ತಂದೆಗೆ ವಿದ್ಯುತ್ ತಂತಿ ತಗುಲಿದೆ. ಇದನ್ನು ನೋಡಿದ ಮಗ ಮಂಜುನಾಥ ಅವರು ತಂದೆಯನ್ನು ಪಾರುಮಾಡಲು ಯತ್ನಸಿದಾಗ ಅವರಿಗೂ ಸಹ ವಿದ್ಯುತ್ ತಗುಲಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಭು ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಮಂಜುನಾಥ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಕೆಲವೇ ನಿಮಿಷಗಳಲ್ಲಿ ಕೊನೆಯುಸಿರೆಳೆದರು. ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ಆವರಿಸಿದೆ. ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


