ಕರ್ನಾಟಕ, ತಮಿಳುನಾಡು ಸೇರಿ 4 ರಾಜ್ಯಗಳಲ್ಲಿ ಏಕಕಾಲಕ್ಕೆ ಎನ್ಐಎ ದಾಳಿ: ಡಿಜಿಟಲ್ ಸಾಧನ ವಶ
ರಾಷ್ಟ್ರೀಯ ತನಿಖಾ ದಳ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆದಿದೆ.

ಬೆಂಗಳೂರು: ರಾಷ್ಟ್ರೀಯ ತನಿಖಾ ದಳ ಕರ್ನಾಟಕ ಸೇರಿದಂತೆ ದೇಶದ ನಾಲ್ಕು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಉಗ್ರ ಸಂಘಟನೆಗಳ ಚಟುವಟಿಕೆಗೆ ಬಳಕೆ ಮಾಡುತ್ತಿದ್ದ ಡಿಜಿಟಲ್ ಉಪಕರಣಗಳು ಹಾಗೂ ಪ್ರಚೋದನಕಾರಿ ವಸ್ತುಗಳನ್ನು ತಪಾಸಣೆ ವೇಳೆ ವಶಕ್ಕೆ ಪಡೆದಿದೆ.
ಭಾರತದಲ್ಲಿ ಭಯೋತ್ಪಾದನೆ ಹರಡುವ ಸಲುವಾಗಿ ದೇಶದಲ್ಲಿ ಯುವಕರನ್ನು ನೇಮಿಸಿ ಉಗ್ರಗಾಮಿಗಳನ್ನಾಗಿಸಲು ಭಾರತೀಯ ಉಪಖಂಡದಲ್ಲಿ ಅಲ್-ಖೈದಾ (ಎಕ್ಯೂಐಎಸ್) ಮತ್ತು ತೆಹರಿಕ್-ಇ-ತಾಲಿಬಾನ್ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ಎನ್ಐಎ ಗುರುವಾರ ಈ ದಾಳಿಗಳನ್ನು ನಡೆಸಿದೆ.
ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ನಡೆದ ಅನೇಕ ದಾಳಿಗಳಲ್ಲಿ ಹಲವನ್ನು ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಮೂರು ಸ್ಥಳಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದು ಸ್ಥಳದಲ್ಲಿ ಶೋಧದ ಸಮಯದಲ್ಲಿ ಹಲವಾರು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಿತೂರಿಯಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಲು ಮತ್ತು ಈ ಎರಡು ಭಯೋತ್ಪಾದಕ ಸಂಘಟನೆಗಳ ಕಾನೂನುಬಾಹಿರ ಹಾಗೂ ದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನಗಳನ್ನು ತಡೆಯಲು ಸಲುವಾಗಿ ಎನ್ಐಎ ಈ ಸಾಧನಗಳನ್ನು ಪರಿಶೀಲಿಸುತ್ತಿದೆ.
ಈ ನಿಷೇಧಿತ ಸಂಘಟನೆಗಳಿಂದ ಈ ಹಿಂದೆ ನೇಮಕಗೊಂಡ ಇಬ್ಬರು ಆರೋಪಿಗಳ ವಿರುದ್ಧ 2023ರ ಏಪ್ರಿಲ್ನಲ್ಲಿ ದಾಖಲಾದ ಪ್ರಕರಣದ ಎನ್ಐಎ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ. ಅಫ್ಘಾನಿಸ್ತಾನದಲ್ಲಿ ಭೂಮಿ ಖರೀದಿಸಲು ವಿದೇಶಕ್ಕೆ ಹಣ ವರ್ಗಾವಣೆ ಸೇರಿದಂತೆ ಭಯೋತ್ಪಾದಕ ಸಂಬಂಧಿತ ಸರಣಿ ಚಟುವಟಿಕೆಗಳಲ್ಲಿ ಆ ಇಬ್ಬರೂ ಭಾಗಿಯಾಗಿದ್ದರು.
ಅವರಿಬ್ಬರು ಭಾರತದಲ್ಲಿ ಸಕ್ರಿಯವಾಗಿರುವ ತಮ್ಮ ಭಯೋತ್ಪಾದಕ ರಂಗಗಳ ಚಟುವಟಿಕೆಗಳನ್ನು ಮುಂದುವರಿಸಲು ಯುವಕರನ್ನು ಈ ಎರಡು ಸಂಘಟನೆಗಳಿಗೆ ನೇಮಕಾತಿ ಮಾಡುವಲ್ಲಿ ಭಾಗಿಯಾಗಿದ್ದರು ಎಂದು ಎನ್ಐಎ ತನಿಖೆಯಿಂದ ತಿಳಿದುಬಂದಿತ್ತು. ಆ ಪಿತೂರಿಯು ಭಾರತದಲ್ಲಿ ಭಯೋತ್ಪಾದನೆ ಹರಡುವ, ಶಾಂತಿ ಮತ್ತು ಕೋಮು ಸೌಹಾರ್ದತೆ ಭಂಗಗೊಳಿಸುವ ಗುರಿ ಹೊಂದಿತ್ತು.
ಇದನ್ನೂ ಓದಿ: ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಕೇಸು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ದಾಳಿ, ದಾಖಲೆಗಳ ಪರಿಶೀಲನೆ
ಎಕ್ಯೂಐಎಸ್ ಭಾರತೀಯ ಉಪಖಂಡದಲ್ಲಿ ಇಸ್ಲಾಮಿಕ್ ರಾಜ್ಯ ಮತ್ತು ಇಸ್ಲಾಮಿಕ್ ಕ್ಯಾಲಿಫೇಟ್ ಸ್ಥಾಪಿಸಲು ಶ್ರಮಿಸುತ್ತಿರುವ ಉಗ್ರಗಾಮಿ ಸಂಘಟನೆಯಾಗಿದ್ದರೆ, ತೆಹರಿಕ್-ಇ-ತಾಲಿಬಾನ್ ಅಫ್ಘಾನ್-ಪಾಕಿಸ್ತಾನ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಸ್ಲಾಮಿಕ್ ಸಶಸ್ತ್ರ ಉಗ್ರಗಾಮಿ ಗುಂಪುಗಳನ್ನು ಒಳಗೊಂಡ ಸಂಘಟನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


