ರಾಜ್ಯದಲ್ಲಿ ಮಳೆಯ ಕೊರತೆ: 105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ; ಸಿಎಂ ಸಿದ್ದರಾಮಯ್ಯ
ಸೆಪ್ಟೆಂಬರ್ 4 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 105 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.

ಬೆಂಗಳೂರು: ಸೆಪ್ಟೆಂಬರ್ 4 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ 105 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
ತೋರಣಗಲ್ಲು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್‌ನಲ್ಲಿ ಮಳೆ ಇಲ್ಲ. ಆಗಸ್ಟ್‌ನಲ್ಲಿ ಶೇ.56 ಮಳೆ ಕೊರತೆ ಆಗಿದೆ. ಕಾವೇರಿಗೆ ಸಂಕಷ್ಟ ಬಂದಿದ್ದು, ಬೆಳೆ ರಕ್ಷಣೆ ಮಾಡಬೇಕಿದೆ. ಇದಕ್ಕಾಗಿ ಸಂಕಷ್ಟ ಸೂತ್ರ ಪಾಲಿಸಬೇಕಿದೆ ಕಾವೇರಿ ನೀರು ಹಂಚಿಕೆ ಮತ್ತು ಬರ ಪರಿಹಾರಕ್ಕೆ ಸರ್ಕಾರ ಸೂಕ್ತವಾಗಿ ಸ್ಪಂದಿಸಬೇಕು” ಎಂದು ಒತ್ತಾಯಿಸಿದರು.
ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳು 113 ತಾಲ್ಲೂಕುಗಳಲ್ಲಿ ಜಂಟಿ ಸಮೀಕ್ಷೆ ನಡೆಸಿದ್ದು, 105 ತಾಲ್ಲೂಕುಗಳು ಬರಪೀಡಿತವಾಗಿವೆ. ಇನ್ನೂ 73 ತಾಲ್ಲೂಕುಗಳು ಬರಗಾಲದ ಪರಿಸ್ಥಿತಿ ಎದುರಿಸುತ್ತಿವೆ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ಇದೇ ವೇಳೆ ತಮಿಳುನಾಡು ಮತ್ತು ಕರ್ನಾಟಕ ನಡುವಿನ ಕಾವೇರಿ ಜಲ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕೆಂದು ಸಿದ್ದರಾಮಯ್ಯ ಅವರು ಮನವಿ ಮಾಡಿದರು.
''ಕಾವೇರಿ ಸಮಸ್ಯೆ ಕುರಿತು ಚರ್ಚಿಸಲು ಪ್ರಧಾನಿ ಮತ್ತು ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಭೇಟಿ ಮಾಡಲು ರಾಜ್ಯ ಸರಕಾರ ಸರ್ವಪಕ್ಷ ನಿಯೋಗವನ್ನು ಕೊಂಡೊಯ್ಯಲು ಉದ್ದೇಶಿಸಿದೆ. ಭೇಟಿಗೆ ಸಮಯ ಕೇಳಲಾಗಿದ್ದು, ಭೇಟಿಗೆ ಅವಕಾಶ ಸಿಕ್ಕರೆ ಕರ್ನಾಟಕದಲ್ಲಿನ ನೀರಿನ ಸಮಸ್ಯೆಯ ನೈಜತೆಯನ್ನು ಸರ್ಕಾರವು ಪ್ರಧಾನಿ ಮತ್ತು ಸಚಿವರಿಗೆ ತಿಳಿಸುತ್ತದೆ ಎಂದು ಹೇಳಿದರು.
ಕೆಆರ್ ಎಸ್ ಅಣೆಕಟ್ಟೆಯಲ್ಲಿ 113 ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಮುಂಗಾರು ಮಳೆಯ ಕೊರತೆಯಿಂದಾಗಿ ಹಾರಂಗಿ ಮತ್ತು ಕಬಿನಿ ಅಣೆಕಟ್ಟುಗಳಲ್ಲಿ ನೀರಿನ ಕೊರತೆಯಿದೆ. ರಾಜ್ಯದ ರೈತರು ತಾವು ಬೆಳೆದ ಬೆಳೆಗಳನ್ನೇ ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಬಿಕ್ಕಟ್ಟಿನ ಸೂತ್ರ ಅಳವಡಿಸುವ ಅಗತ್ಯವಿದೆ’ ಎಂದರು.
'ಒಂದು ರಾಷ್ಟ್ರ, ಒಂದು ಚುನಾವಣೆ' ಕುರಿತು ಕುರಿತು ಮಾತನಾಡಿ, ರಾಷ್ಟ್ರೀಯ, ರಾಜ್ಯ ಮಟ್ಟದ ಮತ್ತು ಸ್ಥಳೀಯ ಆಡಳಿತದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಸುವುದು ಸವಾಲಿನ ಕೆಲಸವಾಗಿದೆ ಎಂದು ಅಭಿಪ್ರಾಯಪಟ್ಟರು.
ವೈಯಕ್ತಿಕವಾಗಿ ಹೇಳುವುದಾದರೆ ಒಂದು ಸಮಯದಲ್ಲಿ ದೇಶಾದ್ಯಂತ ಚುನಾವಣೆ ನಡೆಸುವುದು ಕಷ್ಟ ಎಂದು ನಾನು ಭಾವಿಸುತ್ತೇನೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿಯು ವರದಿ ಸಲ್ಲಿಸಲಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


