ಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವು
ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.

ಬೆಂಗಳೂರು: ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಅವರು ಹೇಳಿದ್ದಾರೆ.
ಗುಣಮಟ್ಟ ಖಾತರಿ ಪ್ರಯೋಗಾಲಯದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮೃತಪಟ್ಟ ಮುಖ್ಯ ಎಂಜಿನಿಯರ್ ಸಿ.ಎಂ. ಶಿವಕುಮಾರ್ ಸ್ಮರಣಾರ್ಥ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾಹಿತಿ ನೀಡಿದರು.
ಶಿವಕುಮಾರ್ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮುಖ್ಯ ಆಯುಕ್ತರ ಸಮ್ಮುಖದಲ್ಲಿ ಶೀಘ್ರದಲ್ಲೇ ಚೆಕ್ ಅನ್ನು ಹಸ್ತಾಂತರ ಮಾಡಲಾಗುವುದು. ಅಲ್ಲದೆ, ಶಿವಕುಮಾರ್ ನೆನಪಿಗಾಗಿ ಎಲ್ಲಾ ರೀತಿಯ ಸೌಲಭ್ಯವುಳ್ಳ ಎರಡು ಆಂಬುಲೆನ್ಸ್‌ಗಳನ್ನು ಬಿಬಿಎಂಪಿ ನೌಕರರ ಸಹಕಾರ ಸಂಘ ಹಾಗೂ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆಗೆ ವಿತರಿಸಲಾಗುವುದು ಎಂದು ಹೇಳಿದರು.
ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಶಿವಕುಮಾರ್ ಅವರ ಪತ್ನಿಗೆ ಉದ್ಯೋಗ ನೀಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಅಗ್ನಿ ಅವಘಡದ ಆಂತರಿಕ ತನಿಖೆ ಕುರಿತು ಮಾತನಾಡಿ, ವರದಿ ನೀಡಲು 15 ದಿನ ವಿಳಂಬವಾಗುವ ಸಾಧ್ಯತೆಗಳಿವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


