ತುಮಕೂರು: ಶಿರಾ ಬಳಿ ಅಪಘಾತ; ಇಬ್ಬರು ಸಾವು, 7 ಮಂದಿಗೆ ಗಾಯ
ಎರಡು ಗೂಡ್ಸ್ ಕ್ಯಾರಿಯರ್ ಮತ್ತು ಬಸ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ, ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು-ಪುಣೆ ಹೆದ್ದಾರಿ NH-40 ನಲ್ಲಿ ನಡೆದಿದೆ.

ತುಮಕೂರು: ಎರಡು ಗೂಡ್ಸ್ ಕ್ಯಾರಿಯರ್ ಮತ್ತು ಬಸ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ, ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಬೆಂಗಳೂರು-ಪುಣೆ ಹೆದ್ದಾರಿ NH-40 ನಲ್ಲಿ ನಡೆದಿದೆ.
ಶಿರಾ ಸಮೀಪದ ಚಿಕ್ಕನಹಳ್ಳಿ ಬಳಿ ಶನಿವಾರ ಬೆಳಗಿನ ಜಾವ ಅಪಘಾತ ಸಂಭವಿಸಿದೆ. ಮೃತರನ್ನು ಕಲಬುರಗಿಯ ಅರಳವಾಡಿ ಗ್ರಾಮದ ಭೀಮಾ ಬಾಯಿ (70) ಮತ್ತು ಅವರ ಮಗ ಮಹಾಂತಪ್ಪ (50) ಎಂದು ಗುರುತಿಸಲಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ ಗಾಯಾಳುಗಳನ್ನು ಶಿರಾದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
ಸಂತ್ರಸ್ತರು ಪ್ರಯಾಣಿಸುತ್ತಿದ್ದ ಟಾಟಾ ಏಸ್ ಸರಕು ಸಾಗಣೆ ವಾಹನಕ್ಕೆ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ವಾಹನವು ಶಿರಾ ಪಟ್ಟಣಕ್ಕೆ ಹೋಗುತ್ತಿದ್ದ ಮತ್ತೊಂದು ಸರಕು ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಇದರಿಂದ ಟಾಟಾ ಏಸ್ ವಾಹನ ಈ ಎರಡು ವಾಹನಗಳ ನಡುವೆ ಸಿಲುಕಿ ನಜ್ಜುಗುಜ್ಜಾಗಿದೆ. ಅದರಲ್ಲಿದ್ದ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಕಲ್ಲಂಬೆಳ್ಳ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


