ಚಿತ್ರದುರ್ಗ: ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ದುರ್ಮರಣ!
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರ್ ತೆರಳುತ್ತಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಕಾರು 7 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಕಾರು ಹೊಸಪೇಟೆಯಿಂದ ತುಮಕೂರು ಕಡೆಗೆ ಚಲಿಸುತ್ತಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಮೃತರನ್ನು ಸಂಸುದ್ದೀನ್ (40), ಮಲ್ಲಿಕಾ (37), ಖಲೀಲ್ (42), ತಬ್ರೇಜ್ (13) ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ನರ್ಗೀಶ್, ರೆಹಾನ್ ಮತ್ತು ರೆಹಮಾನ್ ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
ಲಾರಿ ಚಾಲಕನನ್ನು ಬಂಧಿಸಲಾಗಿದೆ.ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


