ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತು ಪ್ರಚೋದನಕಾರಿ ಹೇಳಿಕೆ: ಮುತಾಲಿಕ್ ಗಡಿಪಾರಿಗೆ ಎಸ್‌ಡಿಪಿಐ ಆಗ್ರಹ
ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.

ಹುಬ್ಬಳ್ಳಿ: ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಗಡಿಪಾರು ಮಾಡುವಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಸ್‌ಡಿಪಿಐ ಮುಖಂಡ ವಿಜಯ ಗುಂಟ್ರಾಳ್, ಕಳೆದ ವರ್ಷ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕಾನೂನು ಬಾಹಿರವಾಗಿ ಅನುಮತಿ ನೀಡಿದ್ದು, ಈ ಬಾರಿ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸರ್ಕಾರ ಯಾವುದೇ ಸಂಘಟನೆಗೆ ಅವಕಾಶ ನೀಡಬಾರದು ಎಂದು ಹೇಳಿದರು.
ಮುತಾಲಿಕ್ ಅವರು ನೀಡಿರುವ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿಗೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮುತಾಲಿಕ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


