ಎರಡನೇ ಮದುವೆಗಾಗಿ 14 ತಿಂಗಳ ಮಗು ಹತ್ಯೆಗೈದ ಪಾಪಿ ತಂದೆ!
ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಭಾವಿಸಿದ ತಂದೆಯೊಬ್ಬ ತನ್ನ 14 ತಿಂಗಳ ಮಗುವನ್ನು ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು: ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಭಾವಿಸಿದ ತಂದೆಯೊಬ್ಬ ತನ್ನ 14 ತಿಂಗಳ ಮಗುವನ್ನು ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಲಿಂಗಸುಗೂರು ತಾಲೂಕಿನ ಕನಸಾವಿ ಗ್ರಾಮದ ನಿವಾಸಿ 32 ವರ್ಷದ ಮಹಾಂತೇಶ್ ಎಂದು ಗುರುತಿಸಲಾಗಿದೆ. ಮೃತ ಮಗುವನ್ನು ಅಭಿನವ ಎಂದು ಗುರ್ತಿಸಲಾಗಿದೆ.
ಮೊದಲ ಪತ್ನಿಗೆ ಅನೈತಿಕ ಸಂಬಂಧ ಇದೆ ಎಂದು ಅನುಮಾನಿಸುತ್ತಿದ್ದ ಆರೋಪಿ, ಎರಡನೇ ಮದುವೆಗೆ ಮುಂದಾಗಿದ್ದ. ಆದರೆ, ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಭಾವಿಸಿ, ಮಗುವನ್ನು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಗ್ರಾಮದಲ್ಲಿ ಬಚ್ಚಿಟ್ಟಿದ್ದಾನೆ.
ಈ ನಡುವೆ ಮಗು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಿಸಿಕೊಡಿದ್ದ ಪೊಲೀಸರಿಗೆ ಮಹಾಂತೇಶ್ ಮೇಲೆ ಅನುಮಾನ ಬಂದಿದೆ. ವಿಚಾರಣೆಗೊಳಪಡಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಆರೋಪಿ ಮೃತದೇಹವನ್ನು ಸುಟ್ಟಿರುವುದಾಗಿ ಹೇಳಿದ್ದ. ಮೂರು ದಿನಗಳ ಬಳಿಕ ಶವ ಬಚ್ಚಿಟ್ಟಿರುವ ಸ್ಥಳವನ್ನು ತೋರಿಸಿದ್ದಾನೆ.
ಇದೀಗ ಮೃತದೇಹವನ್ನು ಹೊರತೆಗೆದಿರುವ ಪೊಲೀಸರು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಮುದಗಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


