ಫೆಬ್ರವರಿ ಒಳಗೆ ಬಜೆಟ್‌ನ ಎಲ್ಲಾ ಅನುದಾನ ಬಳಕೆ ಮಾಡಿ; ವಿವಿಧ ಇಲಾಖೆಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಬಂಡವಾಳ ಮೇಲಿನ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರವರಿ ಒಳಗೆ ವೆಚ್ಚ ಮಾಡುವಂತೆ ವಿವಿಧ ಇಲಾಖೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಬಂಡವಾಳ ಮೇಲಿನ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರವರಿ ಒಳಗೆ ವೆಚ್ಚ ಮಾಡುವಂತೆ ವಿವಿಧ ಇಲಾಖೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿಗಳು ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಯೋಜನಾ ಇಲಾಖೆ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃಧಿ ಮಂಡಳಿ), ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಕಳೆದ ವರ್ಷದ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕೆ 46,955 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು. ಪ್ರಸಕ್ತ ವರ್ಷದಲ್ಲಿ 54,374 ಕೋಟಿ ರೂ. ಹಂಚಿಕೆ ಮಾಡಲಾಗಿದ್ದು, ಇದು ಸರ್ಕಾರದ ಆಸ್ತಿ ಸೃಜನೆಗೂ ಪೂರಕವಾಗಿರುವುದರಿಂದ ಈ ಅನುದಾನ ಸದ್ಬಳಕೆಯಾಗುವುದನ್ನು ಖಾತರಿಪಡಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಗ್ರಾಮೀಣ ರಸ್ತೆಗಳ ಯೋಜನೆಯಡಿ ಹೆಚ್ಚಿನ ಪ್ರಗತಿ ಸಾಧಿಸಲು ಸೂಚಿಸಿದ ಮುಖ್ಯಮಂತ್ರಿಗಳು, ಕೆ.ಕೆ.ಆರ್.ಡಿ.ಬಿ ಯಡಿ ಕಳೆದ ವರ್ಷದ 2,000 ಕೋಟಿ ರೂ. ಗಳಿಗೂ ಹೆಚ್ಚು ಅನುದಾನ ಲಭ್ಯವಿದ್ದು, ಪ್ರಸಕ್ತ ಸಾಲಿನಲ್ಲಿ 3,000 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಆದ್ದರಿಂದ ಶೀಘ್ರವೇ ಕ್ರಿಯಾ ಯೋಜನೆ ಅನುಮೋದನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸಿ ಎಂದರು.
ಜಲ ಸಂಪನ್ಮೂಲ ಇಲಾಖೆಯಲ್ಲಿ 1 ಲಕ್ಷ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುಮೋದಿತ ಕಾಮಗಾರಿಗಳ ಪೈಕಿ ಸುಮಾರು 12,000 ಕೋಟಿ ಅಂದಾಜು ವೆಚ್ಚದ ಕಾಮಗಾರಿಗಳು ಪ್ರಾರಂಭವಾಗಿಲ್ಲ. ಇವುಗಳನ್ನು ಪರಿಶೀಲಿಸಿ, ಕೈಬಿಡುವ ಕುರಿತು ನೀರಾವರಿ ನಿಗಮಗಳ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಲು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


