ಜ್ಯೂಸ್ ಎಂದು ಕೀಟನಾಶಕ ಕುಡಿದು 2 ವರ್ಷದ ಮಗು ದಾರುಣ ಸಾವು!
ಜ್ಯೂಸ್ ಎಂದು ಕೀಟನಾಶಕ ಕುಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು: ಜ್ಯೂಸ್ ಎಂದು ಕೀಟನಾಶಕ ಕುಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.
ರೈತ ದಂಪತಿ ಹನುಮಂತ್ ಮತ್ತು ಪುಷ್ಪಾ ಅವರ ಏಕೈಕ ಪುತ್ರ ಹೆಚ್.ಯಶ್ವಿಕ್ ಮೃತ ಮಗು. ರೇಷ್ಮೆ ಹುಳುವಿನ ಗೂಡಿಗೆ ಸಿಂಪಡಿಸಿಲು ಮನೆಯಲ್ಲಿ ಇರಿಸಿದ್ದ ದ್ರಾವಕವನ್ನು ಜ್ಯೂಸ್ ಎಂದು ಕುಡಿದಿದೆ.
ಇದನ್ನೂ ಓದಿ: ವಿಷಪ್ರಾಶನ ಮಾಡಿಸಿ ಮಗುವನ್ನು ಕೊಂದ ಮಲತಾಯಿ!
ಕೆಲವೇ ನಿಮಿಷಗಳಲ್ಲಿ ಮಗು ಹೊಟ್ಟೆ ನೋವೆಂದು ಅಳಲು ಆರಂಭಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದೆ. ಕೂಡಲೇ ಪೋಷಕರು ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ. ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


