ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಬಂದ ಪತಿಗೆ ಶಾಕ್: ಮನೆಯಲ್ಲಿದ್ದ ಚಿನ್ನಾಭರಣಗಳು ಕಳವು
ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ವಾಪಸ್ಸಾದ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನವಾಗಿರುವ ಘಟನೆಯೊಂದು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಬೆಂಗಳೂರು: ಪತ್ನಿಯ ಅಂತ್ಯಕ್ರಿಯೆ ನೆರವೇರಿಸಿ ಮನೆಗೆ ವಾಪಸ್ಸಾದ ವೇಳೆ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳನ್ನು ಕಳ್ಳತನವಾಗಿರುವ ಘಟನೆಯೊಂದು ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಮಾಗಡಿ ರಸ್ತೆಯ ಗೋಪಾಲಪುರ 2ನೇ ಕ್ರಾಸ್ ನಿವಾಸಿ ಆಟೋ ಚಾಲಕ ಎಸ್ ರಾಮಾಂಜಿ (50) ಎಂಬುವರ ಮನೆಯಲ್ಲಿದ್ದ ಚಿನ್ನಾಭರಣಗಳು ಕಳ್ಳತನವಾಗಿವೆ. ಆ.30ರ ಮಧ್ಯಾಹ್ನ 1.30ರಿಂದ 5 ಗಂಟೆಯ ನಡುವೆ ಘಟನೆ ನಡೆದಿದೆ.
ದೀರ್ಘಾಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮಾಂಜಿ ಅವರ ಪತ್ನಿ ಭಾಗ್ಯಮ್ಮ ಅವರು, ಆಗಸ್ಟ್ 30ರಂದು ನಿಧನರಾಗಿದ್ದು, ಶವವನ್ನು ಮನೆಯ ಹೊರಗೆ ಇರಿಸಲಾಗಿತ್ತು. ಸಂಜೆ ವೇಳೆ ಪತ್ನಿಯ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು. ಇದನ್ನೇ ತಮ್ಮ ಲಾಭಕ್ಕಾಗಿ ಬಳಸಿಕೊಂಡಿರುವ ಆರೋಪಿಗಳು, ಚಿನ್ನಾಭರಣ ಮತ್ತು ನಗದು ದೋಚಿದ್ದಾರೆ.
ಪತ್ನಿಯ ಅಂತಿಮ ವಿಧಿವಿಧಾನದ ಬಳಿಕ ರಾಮಾಂಜಿ ಅವರು ಮನೆಗೆ ವಾಪಸ್ಸಾಗಿದ್ದು, ಈ ವೇಳೆ ಅಲ್ಮೇರಾದಲ್ಲಿಟ್ಟಿದ್ದ ಆಭರಣಗಳು ಕಳ್ಳತನವಾಗಿರುವುದು ಕಂಡು ಬಂದಿದೆ. ಕೂಡಲೇ ಪೊಲೀಸರಿಗೆ ಮಾಗಡಿ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


