ಕೊಡಗಿನ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳಿನಿಂದ ವೇತನವಿಲ್ಲ; ಹಣದ ಕೊರತೆ ಕಾರಣವೇ?
ಮಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಕೊಡಗಿನ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಜೂನ್‌ನಿಂದ ವೇತನ ಬಂದಿಲ್ಲ. ಹಣದ ಕೊರತೆಯೇ ವೇತನ ವಿಳಂಬಕ್ಕೆ ಕಾರಣ ಎನ್ನಲಾಗಿದೆ.

ಮಡಿಕೇರಿ: ಮಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಕೊಡಗಿನ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಜೂನ್‌ನಿಂದ ವೇತನ ಬಂದಿಲ್ಲ. ಶೀಘ್ರವೇ ಹಣ ಬಿಡುಗಡೆ ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದ್ದರೂ ಹಣದ ಕೊರತೆಯೇ ವೇತನ ವಿಳಂಬಕ್ಕೆ ಕಾರಣ ಎನ್ನಲಾಗಿದೆ.
“ಈ ಹಿಂದೆಯೂ ನಮ್ಮ ಸಂಬಳ ವಿಳಂಬವಾಗಿದೆ. ಆದರೆ, ಮೂರು ತಿಂಗಳಿಂದ ಸಂಬಳ ಸಿಗದೇ ಇರುವುದು ಇದೇ ಮೊದಲು. ಮಾಸಿಕ ವೇತನದ ಮೇಲೆ ಹೆಚ್ಚು ಅವಲಂಬಿತರಾಗಿರುವ ಉಪನ್ಯಾಸಕರು ದೈನಂದಿನ ಅಗತ್ಯಗಳನ್ನು ನಿರ್ವಹಿಸಲು ಹೆಣಗಾಡುತ್ತಿದ್ದಾರೆ ” ಎಂದು ಹೆಸರು ಹೇಳಲು ಇಚ್ಚಿಸದ ಅತಿಥಿ ಉಪನ್ಯಾಸಕರೊಬ್ಬರು ಹೇಳಿದ್ದಾರೆ.
ವೇತನ ಬಿಡುಗಡೆ ಮಾಡುವಂತೆ ಉಪನ್ಯಾಸಕರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ವಿವರಿಸಿದ್ದಾರೆ.
“ನಾವು ಕೊಡಗು ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಸಂಪರ್ಕಿಸಿ, ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದೇವೆ. ಆದರೆ ಪ್ರತಿ ತಿಂಗಳು ನಮಗೆ ಹಣದ ಕೊರತೆಯಿದೆ ಎಂದು ಹೇಳಲಾಗುತ್ತದೆ ಮತ್ತು ಶೀಘ್ರದಲ್ಲೇ ವೇತನ ಬಿಡುಗಡೆ ಮಾಡುವುದಾಗಿ” ಭರವಸೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿ: ಕೊಡಗಿನಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗುತ್ತಿದೆ ಮಡಹಾಗಲ ಕೃಷಿ: ಕಡಿಮೆ ಖರ್ಚಿನಲ್ಲಿ ಹೆಚ್ಚು ಹಣ ಗಳಿಕೆಗೆ ಅವಕಾಶ!
“ಅತಿಥಿ ಉಪನ್ಯಾಸಕರ ಕಾಯಂಗೊಳಿಸುವ ಅಗತ್ಯವಿದೆ. ಕಾಯಂ ಸಿಬ್ಬಂದಿ ವೇತನ ಪಡೆಯುತ್ತಿದ್ದರೆ, ಅತಿಥಿ ಉಪನ್ಯಾಸಕರಿಗೆ ಇನ್ನೂ ವೇತನ ಬಂದಿಲ್ಲ. ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ'' ಎಂದು ಹೆಸರು ಹೇಳಲಿಚ್ಛಿಸದ ಪದವಿ ಕಾಲೇಜಿನ ಮತ್ತೊಬ್ಬ ಉಪನ್ಯಾಸಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆದ ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬಂದರೆ, 2023-24ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆದ ಮೊದಲ ವರ್ಷದ ವಿದ್ಯಾರ್ಥಿಗಳು ಕೊಡಗು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುತ್ತಾರೆ(ಅಕ್ಟೋಬರ್ 10, 2022 ರಂದು ಅಧಿಸೂಚನೆ ಹೊರಡಿಸಲಾಗಿದೆ).
ಮಂಗಳೂರು ವಿಶ್ವವಿದ್ಯಾಲಯ ಅಥವಾ ಕೊಡಗು ವಿಶ್ವವಿದ್ಯಾಲಯದೊಂದಿಗೆ ಸೇರಲು ಉಪನ್ಯಾಸಕರಿಗೆ ಆಯ್ಕೆ ಅಥವಾ ಹೊರಗುಳಿಯುವ ಆಯ್ಕೆಯನ್ನು ನೀಡಲಾಗಿದ್ದರೂ ವಿಭಜನೆ ಪ್ರಕ್ರಿಯೆಯು ಇನ್ನೂ ನಡೆಯುತ್ತಿದೆ. ಹೀಗಿದ್ದರೂ, ಉಪನ್ಯಾಸಕರು ಮತ್ತು ಕಾಲೇಜು ಮುಖ್ಯಸ್ಥರಲ್ಲಿ ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲದಿರುವುದರಿಂದ ಕೊಡಗು ವಿಶ್ವವಿದ್ಯಾಲಯದಿಂದ ವೇತನ ಬಿಡುಗಡೆಯಾಗುವ ನಿರೀಕ್ಷೆಯಲ್ಲಿ ಹಲವರು ಉಪನ್ಯಾಸಕರು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಇದನ್ನು ಓದಿ: ಕೊಡವ ರಾಷ್ಟ್ರೀಯ ಸಮಿತಿಯಿಂದ ಕೊಡಗಿನಾದ್ಯಂತ 'ಪಾದಯಾತ್ರೆ
“ಕೊಡಗು ವಿಶ್ವವಿದ್ಯಾಲಯದ ಅಡಿಯಲ್ಲಿ ಇನ್ನೂ ಯಾವುದೇ ನೇಮಕಾತಿಗಳನ್ನು ಮಾಡಿಲ್ಲ ಮತ್ತು ವಿಶ್ವವಿದ್ಯಾಲಯಕ್ಕೆ ಒಬ್ಬ ಅತಿಥಿ ಉಪನ್ಯಾಸಕರ ನೇಮಕ ಆಗಿಲ್ಲ. ಉಪನ್ಯಾಸಕರಿಗೆ ಮಂಗಳೂರು ಮತ್ತು ಕೊಡಗು ವಿಶ್ವವಿದ್ಯಾನಿಲಯವನ್ನು ಆಯ್ಕೆ ಮಾಡಲು ಆಯ್ಕೆಗಳನ್ನು ನೀಡಲಾಗಿದ್ದು, ವಿಭಜನಾ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಇಬ್ಭಾಗವಾದ ನಂತರವೇ ಕೊಡಗು ವಿಶ್ವವಿದ್ಯಾಲಯದ ಅಡಿಯಲ್ಲಿ ನೇಮಕಾತಿ ನಡೆಯಲಿದೆ. ಅಲ್ಲದೆ, ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡುವಂತೆ ಮಂಗಳೂರು ವಿವಿ ವಿಸಿಗೆ ಪತ್ರ ಬರೆದಿದ್ದೇವೆ ಎಂದು ಕೊಡಗು ವಿವಿ ಕುಲಪತಿ ಡಾ.ಅಶೋಕ್ ಎಸ್ ಆಲೂರ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


