ಬ್ರ್ಯಾಂಡ್ ಬೆಂಗಳೂರು: 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಯನ್ನು ಕೂಡಲೇ ಸಲ್ಲಿಸಿ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಶುಕ್ರವಾರ ಸೂಚನೆ ನೀಡಿದೆ.

ಬೆಂಗಳೂರು: ‘ಬ್ರ್ಯಾಂಡ್ ಬೆಂಗಳೂರು’ ಪರಿಕಲ್ಪನೆಯಡಿ 8 ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಶುಕ್ರವಾರ ಸೂಚನೆ ನೀಡಿದೆ.
ನಿನ್ನೆಯಷ್ಟೇ ಬ್ರ್ಯಾಂಡ್ ಬೆಂಗಳೂರು ಸಮಾವೇಶ ಸಮಿತಿ ಅಧ್ಯಕ್ಷ ಜಯರಾಂ ರಾಯಪುರ ಅವರು, ನೋಡಲ್ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಯೋಜನೆಯ ಅನುಷ್ಠಾನಕ್ಕಾಗಿ ಈಗಾಗಲೇ ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಈಗಾಗಲೇ ಸರ್ವಪಕ್ಷಗಳ ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಲಾಗಿದೆ. ಅಲ್ಲದೆ, ವಿವಿಧ ಕ್ಷೇತ್ರಗಳ ಗಣ್ಯರು, ಸ್ಥಳೀಯ ನಾಗರಿಕ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ನಿವಾಸಿ ಕ್ಷೇಮಾಭಿವೃದ್ಧಿ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಲಹೆ/ಅಭಿಪ್ರಾಯಗಳನ್ನು ಪಡೆಯಲಾಗಿದೆ.
ಸಾರ್ವಜನಿಕರಿಂದಲೂ ವೆಬ್ ಪೋರ್ಟಲ್ ಮೂಲಕ ಬೆಂಗಳೂರಿನ ಅಭಿವೃದ್ಧಿಗಾಗಿ 7 ವಿಷಯಗಳಾದ ಸಂಚಾರಯುಕ್ತ ಬೆಂಗಳೂರು, ಹಸಿರು ಬೆಂಗಳೂರು, ಸ್ವಚ್ಛ ಬೆಂಗಳೂರು, ಜನಹಿತ ಬೆಂಗಳೂರು, ಆರೋಗ್ಯಕರ ಬೆಂಗಳೂರು, ಟೆಕ್ ಬೆಂಗಳೂರು ಹಾಗೂ ಜಲಸುರಕ್ಷಾ ಬೆಂಗಳೂರು ಕುರಿತು 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯ ಮತ್ತು ಸಲಹೆಗಳನ್ನು ಸ್ವೀಕರಿಸಲಾಗಿದೆ. ಬೆಂಗಳೂರನ್ನು ಜ್ಞಾನದ ನಗರವನ್ನಾಗಿಸುವ ನಿಟ್ಟಿನಲ್ಲಿ ‘ಶೈಕ್ಷಣಿಕ ಬೆಂಗಳೂರು’ ವಿಷಯದ ಬಗ್ಗೆ ಶಿಕ್ಷಣ ತಜ್ಞರ ಸಲಹೆ ಪಡೆಯಲಾಗಿದೆ. ಒಟ್ಟಾರೆ 8 ಪ್ರಮುಖ ವಿಷಯಗಳ ಕುರಿತು ಸಿದ್ದಪಡಿಸಿರುವ ವರದಿಗಳನ್ನು ಸಂಬಂಧಿಸಿದ ಶೈಕ್ಷಣಿಕ ಪಾಲುದಾರ ಸಂಸ್ಥೆಗಳು ಕೂಡಲೇ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯ 8 ವಿಷಯಗಳ ಕುರಿತಾಗಿ ಸಿದ್ದಪಡಿಸಿರುವ ವರದಿಗಳ ಆಧಾರದ ಮೇಲೆ 8 ಪ್ರತ್ಯೇಕ ಪ್ರ್ಯಾತ್ಯಕ್ಷಿಕೆಗಳನ್ನು ಸಿದ್ದಪಡಿಸಿಕೊಳ್ಳಬೇಕು. ಸಾರ್ವಜನಿಕರಿಂದ ಸ್ವೀಕೃತಿಗೊಂಡಿರುವ ಅಭಿಪ್ರಾಯಗಳ ಬಗ್ಗೆ ಹಾಗೂ ತಜ್ಞರೊಂದಿಗೆ ವಿಚಾರ ವಿನಿಮಯ ನಡೆಸುವ ಬಗ್ಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾವೇಶ ಏರ್ಪಡಿಸಲಾಗುವುದು. ಈ ಸಂಬಂಧ ಅಗತ್ಯವಿರುವ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರಿಗೆ ಸೂಚನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


