ಬೆಂಗಳೂರು: ಅಪ್ರಾಪ್ತ ಗ್ರಾಹಕರೇ ಅಧಿಕವಾಗಿದ್ದ ಪಬ್ ಗಳ ಮೇಲೆ ಸಿಸಿಬಿ ದಾಳಿ
ಸಿಲಿಕಾನ್ ಸಿಟಿಯ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್ಗಳ ಮೇಲೆ ತಡರಾತ್ರಿ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್ಗಳ ಮೇಲೆ ತಡರಾತ್ರಿ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕೋರಮಂಗಲ, ಇಂದಿರಾನಗರ, ಹೆಚ್ಎಸ್ಆರ್ ಲೇಔಟ್, ಬಾಣಸವಾಡಿ, ಹೆಣ್ಣೂರು ಸೇರಿದಂತೆ ನಗರದ ಹಲವು ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಸುಮಾರು ಕಡೆಗಳಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳನ್ನು ಉಲ್ಲಂಘಿಸಲಾಗಿದೆ.
ಅಪ್ರಾಪ್ತ ವಯಸ್ಸಿನವರಿಗೆ ಧೂಮಪಾನಕ್ಕೆ ಅವಕಾಶ, ಮದ್ಯ ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ. ಇದೇ ಸಂದರ್ಭದಲ್ಲಿ ಪಬ್ ಒಂದರಲ್ಲಿ ಪತ್ತೆಯಾದ ಅಪ್ರಾಪ್ತರು ನಾವು ಶಾಸಕರ ಕಡೆಯವರು, ಕಿರುತೆರೆ ಕಲಾವಿದರು ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗವೂ ನಡೆದಿದೆ.
ನಾಲ್ಕು ಕಡೆಗಳಲ್ಲಿ ಪಬ್ ಮಾಲೀಕರ ವಿರುದ್ಧ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.
ನಗರದ ಕೆಲವೆಡೆ ಕಾಲೇಜು ವಿದ್ಯಾರ್ಥಿಗಳು ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್ಗಳತ್ತ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ಎಂದು ಕೆಲ ಕಾಲೇಜು ಮುಖ್ಯಸ್ಥರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರಿಗೆ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರ ಸೂಚನೆಯ ಮೇರೆಗೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


