ರಾಜ್ಯ

ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಹೊಗೆ: ಕೆಲಕಾಲ ಆತಂಕ ಸೃಷ್ಟಿ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಟರ್ಮಿನಲ್‌ 2ರಲ್ಲಿ ನಿಂತಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಏರ್ ಬಸ್‌ ಎ320 ವಿಮಾನಕ್ಕೆ ಏರೊ ಬ್ರಿಡ್ಜ್‌ (ಮೆಟ್ಟಿಲು) ಅಳವಡಿಸುವ ವೇಳೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.

ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಹೊಗೆ: ಕೆಲಕಾಲ ಆತಂಕ ಸೃಷ್ಟಿ
ಅಗ್ನಿಶಾಮಕ ದಳದ ಸಿಬ್ಬಂದಿ ವಾಟರ್ ಜೆಟ್ ಮೂಲಕ ಬೆಂಕಿ ನಂದಿಸುತ್ತಿರುವುದು.
Published On :

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಟರ್ಮಿನಲ್‌ 2ರಲ್ಲಿ ನಿಂತಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಏರ್ ಬಸ್‌ ಎ320 ವಿಮಾನಕ್ಕೆ ಏರೊ ಬ್ರಿಡ್ಜ್‌ (ಮೆಟ್ಟಿಲು) ಅಳವಡಿಸುವ ವೇಳೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.

ಕೂಡೇ ಎಚ್ಚೆತ್ತುಕೊಂಡ ವಿಮಾನ ನಿಲ್ದಾಣದ ಅಗ್ನಿ ಶಾಮಕ ದಳದ ಸಿಬ್ಬಂದಿ ವಾಟರ್‌ಜೆಟ್‌ ಮೂಲಕ ಬೆಂಕಿ ನಂದಿಸಿದರು. ಬಳಿಕ ವಿಮಾನವನ್ನು ತಾಂತ್ರಿಕ ಪರಿಶೀಲನೆಗಾಗಿ ಕಳುಹಿಸಿ, ಸಮಸ್ಯೆ ಸರಿಪಡಿಸಲಾಯಿತು.

ಎಂಜಿನ್‌ ಚಾಲ್ತಿಯಲ್ಲಿದ್ದ ಕಾರಣ ಫ್ಯಾನ್‌ ರಭಸಕ್ಕೆ ಕೆಲವೇ ಕ್ಷಣಗಳಲ್ಲಿ ಹೊಗೆ ಆವರಿಸಿಕೊಂಡಿದೆ. ಹತ್ತಿರದಲ್ಲಿಯೇ ಇದ್ದ ವಿಮಾನ ಸಿಬ್ಬಂದಿ ಮತ್ತು ರನ್‌ವೇ ತಾಂತ್ರಿಕ ವರ್ಗದ ಸಿಬ್ಬಂದಿಯನ್ನು ಅಲ್ಲಿಂದ ದೂರ ಕಳಿಸಲಾಯಿತು. ಈ ವೇಳೆ ವಿಮಾನದಲ್ಲಿ ಪ್ರಯಾಣಿಕರು ಇರಲಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.