ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ 'ಭೀಮ'ನಿಗೆ ಚಿಕಿತ್ಸೆ ನೀಡಲು ಅರಣ್ಯಾಧಿಕಾರಿಗಳು ಹಿಂದೇಟು; ಸಂಕಷ್ಟದಲ್ಲಿ ಗಜರಾಜ!
ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ.

ಹಾಸನ: ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿರುವ 40 ವರ್ಷದ ಭೀಮಾ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಇನ್ನೂ ಮುಂದಾಗಿಲ್ಲ. ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆಯನ್ನು ಸ್ಥಗಿತಗೊಳಿಸಲಾಗಿದೆ.
ತೀವ್ರ ನೋವಿನಿಂದ ನಡೆಯಲು ಸಾಧ್ಯವಾಗದೆ, ಆಲೂರಿನ ಕಾಫಿ ಎಸ್ಟೇಟ್‌ನಲ್ಲಿ ಒಂದೆರಡು ದಿನಗಳಿಂದ ಒಂದೇ ಸ್ಥಳದಲ್ಲಿ ಆನೆ ನಿಂತಿರುವುದು ಕಂಡುಬಂದಿದೆ.
ಭೀಮ ಆನೆಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುವ ವೇಳೆ, ಶಾರ್ಪ್ ಶೂಟರ್ ವೆಂಕಟೇಶ್ ಸಾವಿಗೀಡಾಗಿದ್ದರು. ಆಗಸ್ಟ್ 31ರಂದು ಘಟನೆ ನಡೆದಿದ್ದು, ಅಂದಿನಿಂದ ಗಾಯಗೊಂಡ ಆನೆ ಚಿಕಿತ್ಸೆಗಾಗಿ ಕಾಯುತ್ತಲೇ ಇದೆ.
ಈಮಧ್ಯೆ, ಘಟನೆ ನಂತರ ಅರಣ್ಯ ಇಲಾಖೆಯು ಆನೆಗೆ ಚಿಕಿತ್ಸೆ ನೀಡುವ ಕಾರ್ಯಾಚರಣೆಯನ್ನು ನಿಲ್ಲಿಸಿದೆ ಎನ್ನಲಾಗಿದೆ. ಇದೀಗ ಸ್ಥಳೀಯರು ಗಾಯಗೊಂಡಿರುವ ಆನೆಗೆ ಚಿಕಿತ್ಸೆ ನೀಡುವಂತೆ ಇಲಾಖೆಯನ್ನು ಒತ್ತಾಯಿಸುತ್ತಿದ್ದು, ಅದರ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಡಿಸಿಎಫ್ ಮೋಹನ್ ಕುಮಾರ್ ಪ್ರಕಾರ, ಆನೆಗೆ ಚಿಕಿತ್ಸೆ ನೀಡಲು ಇಲಾಖೆ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಯೋಜಿಸಿದೆ ಎಂದಿದ್ದಾರೆ.
ಆಲೂರು ತಾಲೂಕಿನ ಮಗ್ಗೆ ರಾಯರಕೊಪ್ಪಲು ಹಾಗೂ ಸಕಲೇಶಪುರದ ಹೆತ್ತೂರು ಭಾಗಗಳಲ್ಲಿ ಆನೆಗಳು ನಿರಂತರವಾಗಿ ಬೆಳೆದು ನಿಂತಿರುವ ಬೆಳೆಗಳನ್ನು ನಾಶಪಡಿಸುತ್ತಿರುವುದರಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


