ರಾಜ್ಯ

ಬೆಂಗಳೂರು: ಹೊಟೇಲ್ ನಲ್ಲಿ ರೂಂ ಕೊಟ್ಟು ಪ್ರೇಮಿಗಳ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ; ಇಬ್ಬರ ಬಂಧನ

ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್​ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಹೊಟೇಲ್ ನಲ್ಲಿ ರೂಂ ಕೊಟ್ಟು ಪ್ರೇಮಿಗಳ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ; ಇಬ್ಬರ ಬಂಧನ
ಬಂಧಿತ ಆರೋಪಿಗಳಾದ ಕಿರಣ್ ಮತ್ತು ನಯನಾ
Published On :

ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್​ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇವರಿಬ್ಬರನ್ನು ನಯನಾ ಮತ್ತು ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿ ನಯನಾ ಸಂತ್ರಸ್ತ ಯುವತಿಯ ಸಂಬಂಧಿಯಾಗಿದ್ದಳು. ಆರೋಪಿಗಳು ಕೆಂಗೇರಿ ಮುಖ್ಯರಸ್ತೆಯ ಕೆಂಚನಾಪುರದಲ್ಲಿ ಹೋಟೆಲ್ ನಡೆಸುತ್ತಿದ್ದರು.

ಪೊಲೀಸರ ಪ್ರಕಾರ, ಎಂಬಿಎ ಪದವೀಧರಳಾಗಿದ್ದ ಯುವತಿ ತನ್ನ ಪ್ರಿಯಕರನೊಂದಿಗೆ ಹೋಟೆಲ್‌ಗೆ ಆಗಾಗ್ಗೆ ಬರುತ್ತಿದ್ದಳು.  ಈ ವೇಳೆ ಆರೋಪಿಗಳು ಜೋಡಿಯನ್ನು ಹೋಟೆಲ್ ಕೊಠಡಿಯಲ್ಲಿ ಒಂದಿಷ್ಟು ಸಮಯ ಕಳೆಯುವಂತೆ ಪ್ರೋತ್ಸಾಹಿಸುತ್ತಿದ್ದರು. ರೂಮಿನಲ್ಲಿ ರಹಸ್ಯವಾಗಿ ಕ್ಯಾಮೆರಾ ಇಟ್ಟು, ಇಬ್ಬರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ.

ಅದನ್ನು ಅಶ್ಲೀಲವಾಗಿ ಎಡಿಟ್ ಮಾಡಿ‌ ಯುವತಿಗೆ ಕಿರಣ್ ವಾಟ್ಸ್ಆ್ಯಪ್ ಮಾಡಿದ್ದ. ನಂತರ ಫೋಟೊ, ವಿಡಿಯೋ ತಕ್ಷಣ ಡಿಲೀಟ್ ಮಾಡಿದ್ದ. ನಂತರ ಕರೆ ಮಾಡಿ ಒಂದು ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ, ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುವುದಾಗಿ ನಯನಾ ಮತ್ತು ಕಿರಣ್‌ ಬ್ಲ್ಯಾಕ್‌ಮೇಲ್‌ ಮಾಡಿದ್ದರು.

ಯುವತಿ ಈ ಕುರಿತು ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿ ನಯನ ಹಾಗೂ ಕಿರಣ್‌ರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.