ರಾಜ್ಯ

ಬೆಂಗಳೂರು: ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಯುವಕನ ಸಾವು, ಹತ್ಯೆ ಶಂಕೆ!

ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಯುವಕನ ಸಾವು, ಹತ್ಯೆ ಶಂಕೆ!
ಘಟನಾ ಸ್ಥಳದಲ್ಲಿ ಪರಿಶೀಲಿಸುತ್ತಿರುವ ಪೊಲೀಸರು
Published On :

ಬೆಂಗಳೂರು: ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ರಫೀಕ್ ಅಹ್ಮದ್ ನನ್ನು ಚಾಕುವಿನಿಂದ ಇರಿದು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗೆ ಗೊತ್ತಿದ್ದ ಆರೋಪಿಗಳಿಗೆ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ವೈಟ್‌ಫೀಲ್ಡ್, ಡಿಸಿಪಿ ಡಾ ಸಂಜೀವ್ ಎಂ ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.