ರಾಜ್ಯ

ಸಚಿವ ಮಧು ಬಂಗಾರಪ್ಪ ಬೆಂಬಲಿಗರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಆರೋಪ

ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ತಮಗೆ ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಮಧು ಬಂಗಾರಪ್ಪ ಬೆಂಬಲಿಗರಿಂದ ಕೊಲೆ ಬೆದರಿಕೆ: ಪ್ರಣವಾನಂದ ಸ್ವಾಮೀಜಿ ಆರೋಪ
ಪ್ರಣಾವನಂದ ಸ್ವಾಮೀಜಿ
Published On :

ಬೆಂಗಳೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಬಲಿಗರು ತಮಗೆ ಕರೆ ‌ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಅವರು ಶನಿವಾರ ಗಂಭೀರ ಆರೋಪ ಮಾಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಮಧು ಬಂಗಾರಪ್ಪ ಬೆಂಬಲಿಗರಿಂದ ನನಗೆ ಜೀವ ಬೆದರಿಕೆ ಇದೆ. ಹೀಗಾಗಿ ಪೊಲೀಸ್ ‌ಕಮಿಷನರ್ ಭೇಟಿ ಮಾಡಿ, ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾರೆ.

ಬಿ.ಕೆ.ಹರಿಪ್ರಸಾದ್‌ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ? ಬೇರೆ ಸಮುದಾಯದವರು ಹೋರಾಟ ‌ಮಾಡಿದ್ದರಲ್ವಾ. ಸಮುದಾಯಕ್ಕೆ ಮಧು ಬಂಗಾರಪ್ಪ ಅವರ ಕೊಡುಗೆಯೇನು ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಈಡಿಗ ಸಮುದಾಯವನ್ನು ಸರ್ಕಾರವೇ ಒಡೆಯುತ್ತಿದೆ. ಸ್ವಾಮೀಜಿಗಳ ವಿರುದ್ಧ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ನಾರಾಯಣ ಗುರು ರಥ ಬಂದಾಗ ಒಂದೇ ಒಂದು ಹಾರವನ್ನು ಮಧು ಬಂಗಾರಪ್ಪ ಹಾಕಿದರಾ. ನಾನು ಸಮುದಾಯದ ಭೂಮಿ ಕೊಳ್ಳೆ ಹೊಡೆದಿಲ್ಲ. ಸೈಟ್ ಮಾಡಿ ಮಾರಾಟ ಮಾಡಿಲ್ಲ. ಬಿ ಕೆ ಹರಿಪಸ್ರಾದ್ ಸಹ ಭೂಮಿ ಕಳ್ಳತನ ಮಾಡಿದವರಲ್ಲ ಎಂದಿದ್ದಾರೆ.

ಇನ್ನು ಸ್ವಾಮೀಜಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ ಅವರು, ಪ್ರಣವಾನಂದ ಶ್ರೀ ಈಡಿಗ ಸ್ವಾಮೀಜಿ ಅಲ್ಲವೇ ಅಲ್ಲ. ಸುಮ್ಮನೆ ಬುರುಡೆ ಬಿಟ್ಟುಕೊಂಡೇ ಬಂದಿದ್ದಾರೆ. ಕಳ್ಳತನ ಮಾಡಿದ್ದರೆ, ತಪ್ಪು ಮಾಡಿದ್ದರೆ ಕಣ್ಣೀರು ಹಾಕೋದು ಎಂದು ಕಿಡಿಕಾರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.