ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆಯಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ!
ಹಿಂದೂ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಹಿಂದೂ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು.
ಅಪರಾಧ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗುತ್ತಿರುವುದರಿಂದ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನು ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರಿಂದ, ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ಬಂಧನ ಆದೇಶವನ್ನು ಪುನೀತ್ ಪ್ರಶ್ನಿಸಿದ್ದರು. ಇದರ ವಿಚಾರಣೆಗಾಗಿ ಸರ್ಕಾರ ಸಲಹಾ ಸಮಿತಿಯನ್ನು ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, 'ಅವರನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ' ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ.
ಈ ಹಿನ್ನೆಲೆಯಲ್ಲಿ ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಅವರನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಪುನೀತ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ.
ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ಹೈಕೋರ್ಟ್ ನೋಟಿಸ್ ಜಾರಿ
ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಆಗಸ್ಟ್ 24ರಂದು ಹೈಕೋರ್ಟ್ ನೋಟಿಸ್ ಜಾರಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


