ಕಾವೇರಿ: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ಆದೇಶ
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.
ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಆದೇಶಿಸಿದೆ. 15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, ಸಿಡಬ್ಲ್ಯೂಆರ್‌ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದ್ದು, ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ಸಂಕಷ್ಟ ಎದುರಾಗಿದೆ.
ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ ನಡೆದಿದ್ದು, ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ಹಾಜರಿದ್ದರು. 24ನೇ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಸೇನಾ, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಮಣಿಯನ್, ಕೇರಳದ ಅಧಿಕಾರಿಗಳೂ ಖುದ್ದು ಹಾಜರಿದ್ದರು. ಕರ್ನಾಟಕ ಮತ್ತು ಪುದುಚೇರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು. ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು.
ಇದನ್ನೂ ಓದಿ: ಕಾವೇರಿ ವಿವಾದವನ್ನು ಮಾನವೀಯ ಬಿಕ್ಕಟ್ಟು ಎಂದು ಪರಿಗಣಿಸಿ: ಸ್ಟಾಲಿನ್, ಸಿದ್ದರಾಮಯ್ಯಗೆ ಬಿಜೆಪಿ ಸಂಸದ ಲಹರ್ ಸಿಂಗ್
ಈ ಹಿಂದೆ ಸೆಪ್ಟಂಬರ್ 12ರ ಆದೇಶದಂತೆ 15 ದಿನ ನೀರು ಬಿಡಲು ಸೂಚನೆ ನೀಡಲಾಗಿದೆ. ಪ್ರಾಧಿಕಾರ ದೆಹಲಿಯ CWMA ಕಚೇರಿಯಿಂದ ಆದೇಶ ಹೊರಡಿಸಿದೆ. ಕಾವೇರಿ ಪ್ರಾಧಿಕಾರದ ಕಚೇರಿಯಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯದ ಅಧಿಕಾರಿಗಳು ಖುದ್ದು ಭಾಗಿಯಾಗಿದ್ದರೆ ಕರ್ನಾಟಕ ಮತ್ತು ಪುದುಚೇರಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


