ರಾಜ್ಯ

ಬೆಂಗಳೂರು: ಚಾಮರಾಜಪೇಟೆ ವಿನಾಯಕ ಥಿಯೇಟರ್ ಬಳಿ ಅಗ್ನಿ ಅವಘಡ, 8 ಮನೆ ಬೆಂಕಿಗಾಹುತಿ, ಇಬ್ಬರಿಗೆ ಗಾಯ

ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಚಾಮರಾಜಪೇಟೆ ವಿನಾಯಕ ಥಿಯೇಟರ್ ಬಳಿ ಅಗ್ನಿ ಅವಘಡ, 8 ಮನೆ ಬೆಂಕಿಗಾಹುತಿ, ಇಬ್ಬರಿಗೆ ಗಾಯ
ಚಾಮರಾಜಪೇಟೆ ವಿನಾಯಕ ಥಿಯೇಟರ್ ಬಳಿ ಅಗ್ನಿ ಅವಘಡ
Published On :

ಬೆಂಗಳೂರು: ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ(vinayaka theater) ಬಳಿ ಇರುವ ಗೋದಾಮಿನಲ್ಲಿ ಅಗ್ನಿ(Fire) ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಸಿಲಿಂಡರ್ ಸ್ಫೋಟದಿಂದ ಬೆಂಕಿ
ಗೋದಾಮಿನಲ್ಲಿ ಎರಡು ಸಿಲಿಂಡರ್​ಗಳು ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದಲ್ಲಿ ಗಾಯೊಂಡಿರುವ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ಈ ಅಗ್ನಿ ಅವಘಡದ ಬಗ್ಗೆ ಪ್ರತ್ಯಕ್ಷದರ್ಶಿ ಸೈಯ್ಯದ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಸಾಕೆಟ್ ಬೋರ್ಡ್​ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಮಹಿಳೆಯರು ಬೆಂಕಿ ಹೊತ್ತಿದ್ದ ಬಗ್ಗೆ ಮನೆಯಿಂದ ಹೊರಗೆ ಓಡಿ ಬಂದು ನನಗೆ ಮಾಹಿತಿ ನೀಡಿದರು. ಅಷ್ಟರಲ್ಲಿ ಮನೆಯಲ್ಲಿದ್ದ ಸಿಲಿಂಡರ್​​ ಸ್ಫೋಟದ ಜೊತೆ ಬೆಂಕಿ ಹರಡಿತ್ತು. ತಕ್ಷಣ ಅಗ್ನಿಶಾಮಕ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಎಲ್ಲರೂ ಹೊರಗೆ ಓಡಿ ಬಂದಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಮಾಹಿತಿ ನೀಡಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.